Post Office Recruitment :ಅಂಚೆ ಇಲಾಖೆಯಲ್ಲಿ 40 ಸಾವಿರ ಉದ್ಯೋಗಾವಕಾಶ: 29 ಸಾವಿರ ಆರಂಭಿಕ ವೇತನ: SSLC ಆದವರು ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶವಿದ್ದು, ಒಟ್ಟು 40,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಗಳಿಗೆ ಅನುಗುಣವಾಗಿ 29 ಸಾವಿರದ ವರೆಗೂ ಆರಂಭಿಕ ವೇತನ ಇರಲಿದೆ. ಹೌದು, ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು ಮತ್ತು ಗರಿಷ್ಠ 40 ವರ್ಷ ಮೀರಿರಬಾರದು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಪೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯದಿನವಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.100 ಆಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಬಳಿಕ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಒಟ್ಟು ಹುದ್ದೆಗಳು 40,889
ಇಲಾಖೆ ಹೆಸರುಭಾರತೀಯ ಅಂಚೆ ಇಲಾಖೆ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ27-01-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-02-2023
ಅಧಿಸೂಚನೆ ಮತ್ತು registration ಮಾಡಲುಇಲ್ಲಿ ಕ್ಲಿಕ್ ಮಾಡಿ
ನೋಟೀಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version