ImportantJob News
Trending

Banking Jobs: ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಉದ್ಯೋಗಾವಕಾಶ: ಆರಂಭಿಕ ವೇತನ 36 ಸಾವಿರದಿಂದ 63 ಸಾವಿರ

ಪದವಿ ಆದವರು ಅರ್ಜಿ ಸಲ್ಲಿಸಬಹುದು

ಬ್ಯಾಂಕಿoಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಶುಭಸುದ್ದಿ. ಹೌದು, ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಒಟ್ಟು 500 ಪ್ರೊಬೆಷನರಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.. ಅಧಿಸೂಚನೆಯ ಪ್ರಕಾರ ಮಾಸಿಕ ವೇತನ 36 ಸಾವಿರದಿಂದ 63 ಸಾವಿರದ ವರೆಗೆ ಇದ್ದು, ಯಾವುದೇ ಪದವಿ, ಬಿ.ಇ. ಮತ್ತು ಬಿ.ಟೆಕ್ ಆದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳು500
ಬ್ಯಾಂಕ್ ಹೆಸರುಬ್ಯಾಂಕ್ ಆಫ್ ಇಂಡಿಯಾ
ಮಾಸಿಕ ವೇತನ36 ಸಾವಿರದಿಂದ 63 ಸಾವಿರ
ವಿದ್ಯಾರ್ಹತೆಪದವಿ & ಎಂಜಿನಿಯರಿಂಗ್

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಕನಿಷ್ಠ 20 ವರ್ಷ ಹಾಗು ಗರಿಷ್ಠ 29 ವರ್ಷ ಮೀರಿರಬಾರದು ಎಂದು ಮಾಹಿತಿ ನೀಢಲಾಗಿದೆ. ಆನ್​ಲೈನ್ ಟೆಸ್ಟ್, ಗ್ರೂಪ್ ಡಿಸ್ಕಷನ್, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಶುಲ್ಕ ಪಾವತಿಸಲು ಫೆಬ್ರವರಿ 25, 2023 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆಗೆ ಆರಂಭ11-02-2023
ಅರ್ಜಿ ಸಲ್ಲಿಸಲು ಕೊನೆಯ ದಿನ25-02-2023
ಅರ್ಜಿ ಸಲ್ಲಿಕೆ ವಿಧಾನOnline
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button