ಯಲ್ಲಾಪುರ: ಹೊಸ ಜಾತಿಯ ಸಿಹಿ ನೀರಿನ ಏಡಿಯೊಂದು ತಾಲೂಕಿನಲ್ಲಿ ಪತ್ತೆಯಾಗಿದೆ. ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆ, ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ ಮತ್ತು ಪುಣೆಯ ಪ್ರಾಣಿ ಸರ್ವೇಕ್ಷಣಾಲಯದ ಸಮೀರಕುಮಾರ ಪಾಟಿ ತಂಡ ಈ ವೇಲಾ ಪ್ರಭೇದದ ಹೊಸ ಜಾತಿಯ ಸಿಹಿನೀರಿನ ಏಡಿಯನ್ನು ಪತ್ತೆ ಹಚ್ಚಿದೆ. ಇದಕ್ಕೆ ವೇಲಾ ಬಾಂಧವ್ಯ ಎಂದು ಹೆಸರಿಡಲಾಗಿದೆ.
ಸಾಮಾನ್ಯವಾಗಿ ಹಳದಿ ಮತ್ತು ಕೇಸರಿ ಮಿಶ್ರಿತ ಮೈಬಣ್ಣದ ಈ ಏಡಿಯು ಮಳೆಗಾಲದಲ್ಲಿ ತೋಟ, ಗದ್ದೆಗಳಲ್ಲಿ ಕಾಣಸಿಗುತ್ತವೆ. ನಾಲ್ಕು ಇಂಚು ಅಗಲ, ಮೂರೂವರೆ ಇಂಚು ಉದ್ದವಿರುವ ಈ ಏಡಿಯ ತಲೆಯಿಂದ ಬೆನ್ನಿನ ಮೇಲೆ ಕಪ್ಪು ಬಣ್ಣದ ಪತಂಗದoಥ ಆಕಾರವಿದೆ. ಸಮತಟ್ಟಾದ ಜಾಗದ ಮಣ್ಣಿನಲ್ಲಿ ಸುಮಾರು ಒಂದರಿoದ ಒಂದೂವರೆ ಅಡಿಯಷ್ಟು ಆಳದಲ್ಲಿ ರಂಧ್ರ ಕೊರೆದು ಇದು ವಾಸ ಮಾಡುತ್ತದೆ.
ವಿಸ್ಮಯ ನ್ಯೂಸ್, ಯಲ್ಲಾಪುರ