ಕುಮಟಾ: “ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪಾಲಕರ ಜವಬ್ದಾರಿಯೂ ಅತೀ ಮುಖ್ಯ. ಪ್ರಯತ್ನ ಮತ್ತು ಶೃದ್ಧೆಯಿಂದ ಎಂತಹ ವಿದ್ಯೆಯನ್ನಾದರೂ ಕರಗತ ಮಾಡಿಕೊಳ್ಳಬಹುದು” ಎಂದು ಹಿರೇಗುತ್ತಿ ಹೈಸ್ಕೂಲ್ ಆಡಳಿತ ಮಂಡಳಿ ಮಹಾತ್ಮಗಾಂಧಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ಎನ್ ನಾಯಕ ನುಡಿದರು. ಅವರು ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನಲ್ಲಿ ನಡೆದ 10 ನೇ ತರಗತಿಯ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತ “ಕಾಲ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗಬೇಕು ಜೊತೆಗೆ ನಾವು ನೀವು ಶಿಕ್ಷಣ ಕ್ಷಣ ಕ್ಷಣ ಸಾಗುತ್ತಿರಬೇಕು” ಎಂದರು.
ಪಾಲಕ ಪ್ರತಿನಿಧಿ ಗಣಪತಿ ಗುನಗಾ ಮೊಗಟಾ ಮಾತನಾಡಿ “ವಿದ್ಯಾರ್ಥಿಗಳು ಒಂದು ಗುರಿಯನ್ನು ಇಟ್ಟುಕೊಂಡು ಆ ಗುರಿಯ ಸಫಲತೆಯಲ್ಲಿ ವಿದ್ಯಾರ್ಥಿಗಳ ಅವಿರತ ಪ್ರಯತ್ನ ಮುಖ್ಯ” ಎಂದರು. ಎನ್.ಟಿ ನಾಯಕ ಆಡಳಿತ ಮಂಡಳಿಯ ಸದಸ್ಯರು ಮಾತನಾಡಿ “ಹಿರೇಗುತ್ತಿ ಹೈಸ್ಕೂಲ್ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂಬುದು ನನಗೆ ಹಾಗೂ ನಮ್ಮ ಊರಿಗೆ ಹೆಮ್ಮೆಯ ವಿಷಯ ಬದುಕನ್ನು ಕಟ್ಟಿಕೊಡುವ ಜೀವನ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದರು”.
ವಿಶ್ವನಾಥ ಬೇವಿನಕಟ್ಟಿ ಶಿಕ್ಷಕರು ಮಾತನಾಡಿ “ಸುಖಾರ್ಥಿಯಾದವನು ವಿದ್ಯೆಯನ್ನು ಬಿಡಬೇಕು, ವಿದ್ಯಾರ್ಥಿಯಾದವನು ಸುಖವನ್ನು ಬಿಡಬೆಕು, ಸುಖಾರ್ಥಿಯಾದವನಿಗೆ ವಿದ್ಯೆ ಎಲ್ಲಿಂದ? ಮತ್ತು ವಿದ್ಯಾರ್ಥಿಯಾದವನಿಗೆ ಸುಖ ಎಲ್ಲಿಂದ? ಸಮಯ ಮತ್ತು ಗುರಿ ಇವೆರಡೂ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖವಾದದ್ದು” ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಎನ್ ರಾಮು ಹಿರೇಗುತ್ತಿ “ವಿದ್ಯೆ ಯಾರೊಬ್ಬನ ಆಸ್ತಿಯಲ್ಲ ಅದು ಸಾರ್ವತ್ರಿಕ ಮತ್ತು ಸಮದರ್ಶಿ ಅದು ಪ್ರಯತ್ನ ಮತ್ತು ಶೃದ್ಧೆಯಿಂದ ಫಲಿಸುವಂತಹದು” ಹಿಂದೆ ಗುರುಕುಲ ಶಿಕ್ಷಣ ಪದ್ಧತಿ ಇತ್ತು. ಗುರುವಿನ ಹತ್ತಿರ ಹೋಗಿ ಅವರ ಸೇವೆಯಲ್ಲಿ ತೊಡಗಿ ಶಿಕ್ಷಣ ಹೊಂದಬೇಕಾಗಿತ್ತು ಸ್ವಲ್ಪ ಕಾಲದ ನಂತರ ‘ಛಡಿಯಾಮ ಛಂ,,….ಛA ವಿದ್ಯಾಯ ಘಂ ಘಂ ಬಂತು. ಈಗ ಶಿಕ್ಷಣ ಮಕ್ಕಳ ಹಕ್ಕಾಗಿದೆ” ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಮಂಡಳಿಯ ಸೆಕ್ರೆಟರಿ ಮೋಹನ ಬಿ ಕೆರೆಮನೆ, ವಿದ್ಯಾರ್ಥಿ ಪಾಲಕ ಪ್ರತಿನಿಧಿಗಳಾದ ನಾಗೇಶ ನಾಯ್ಕ, ಲಕ್ಷಿ ನಾಯಕ, ಶಿಕ್ಷಕರಾದ ಬಾಲಚಂದ್ರ ಹೆಗಡೇಕರ, ನಾಗರಾಜ ನಾಯಕ, ಮಹಾದೇವ ಗೌಡ, ಬಾಲಚಂದ್ರ ಅಡಿಗೋಣ, ಜಾನಕಿ ಗೊಂಡ, ಇಂದಿರಾ ನಾಯಕ, ಶಿಲ್ಪಾ ನಾಯಕ, ಮದನ ನಾಯಕ, ಕವಿತಾ ಅಂಬಿಗ, ಉಪಸ್ಥಿತರಿದ್ದರು.
ನಾಗಶ್ರೀ ಸಂಗಡಿಗರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ವಿದ್ಯಾರ್ಥಿ ಅಕ್ಷತಾ ನಾಗೇಶ ನಾಯಕ ಕಾರೆಬೈಲ್ ಸರ್ವರನ್ನೂ ಸ್ವಾಗತಿಸಿದರು. ವಿದ್ಯಾರ್ಥಿ ಕಾಂಚಿಕಾ ನಾಯಕ ನಿರೂಪಣೆ ಮಾಡಿದರು. ವಿದ್ಯಾರ್ಥಿ ವಿಜೇತ ಗುನಗಾ ವಂದಿಸಿದರು. ಗೋಪಾಕೃಷ್ಣ ಗುನಗಾ, ಗೋವಿಂದ ನಾಯ್ಕ ಸಹಕರಿಸಿದರು. ಎಲ್ಲಾ ವಿದ್ಯಾರ್ಥಿ ಪಾಲಕ ವೃಂದದವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಕುಮಟಾ