Join Our

WhatsApp Group
Focus NewsImportant
Trending

ಕಾರಿಗೆ ಡಿಕ್ಕಿಹೊಡೆದ ಟ್ಯಾಂಕರ್: ಜೆಡಿಎಸ್ ಜಿಲ್ಲಾಧ್ಯಕ್ಷ ಸೇರಿ ಮೂವರಿಗೆ ಗಂಭೀರ ಗಾಯ

ಕುಮಟಾ: ತಾಲೂಕಿನ ರಾಷ್ಟಿçÃಯ ಹೆದ್ದಾರಿ ಹಿರೇಗುತ್ತಿಯ ಸಮೀಪ ಟ್ಯಾಂಕರ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದಾರೆ. ಹೌದು, ತಾಲೂಕಿನ ಹಿರೇಗುತ್ತಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡರ ಕಾರು ಅಪಘಾತಕ್ಕೀಡಾಗಿದೆ. ಅಂಕೋಲಾದಿoದ ಹೊನ್ನಾವರ ಕಡೆಗೆ ಪ್ರಯಾಣ ಬೆಳೆಸುತ್ತಿರುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನಡೆದ ಜಲ ಅವಘಡ: ನೀರಿನಿಂದ ಮೇಲೆತ್ತಿ ಉಪಚಾರಕ್ಕಾಗಿ ಆಸ್ಪತ್ರೆಗೆ ಕರೆ ತಂದರೂ ಬದುಕುಳಿಯದ ಮೀನುಗಾರ

ಅತೀ ವೇಗವಾಗಿ ಬಂದ ಟ್ಯಾಂಕರ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ ಎಂ ಭಂಡಾರಿ, ಪರಮೇಶ್ವರ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ. ಈ ಕುರಿತು ಮಾಹಿತಿ ಪಡೆದ ಪಕ್ಷದ ಮುಖಂಡರು, ಕಾರ್ಯಕರ್ತರು ಕುಮಟಾ ತಾಲೂಕು ಆಸ್ಪತ್ರೆಗೆ ಆಗಮಿಸಿ, ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೇ ಕೈಕಾಲು ಪ್ರಾಕ್ಟರ್ ಸೇರಿದಂತೆ ಶಿರ ಭಾಗಕ್ಕೂ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಇದೀಗ ಗಾಯಾಳುಗಳು ಮಣಿಪಾಲ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Back to top button