Important
Trending

ಪಿಎಸ್ಐ ಹಗರಣದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಸಿದ್ದಾಪುರ: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಗಾಗಿದ್ದ ತಾಲೂಕಿನ ನೆಲಮಾವಿನ ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಿದ್ದಾಪುರ ನೆಲೆಮಾವು ಸಹಕಾರಿ ಸೇವಾ ಸಂಘದ ಅಧ್ಯಕ್ಷರಾಗಿದ್ದ ಅವರು, ಪಿಎಸ್ಐ ಹಗರಣದಲ್ಲಿ ಬೆಂಗಳೂರಿನಲ್ಲಿ ವಿಚಾರಣೆ ಎದುರಿಸಿ ಸಿದ್ದಾಪುರಕ್ಕೆ ಮರಳಿದ್ದರು. ಆದರೆ ಇದ್ದಕ್ಕಿದ್ದಂತೆ ಇಂದು ಆತ್ಮಹತ್ಯೆಗೆ ಶರಣಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ವಿಸ್ಮಯ ನ್ಯೂಸ್ ದಿವಾಕರ ಸಂಪಖಂಡ, ಸಿದ್ದಾಪುರ

Related Articles

Back to top button