124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?

ಅಂಕೋಲಾ: ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 124  ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಲಾಗಿದ್ದು ಹಳಿಯಾಳ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಹಾಲಿ ಶಾಸಕ ಆರ್. ವಿ.ದೇಶಪಾಂಡೆ, ಕಾರವಾರ ಅಂಕೋಲಾ ಕ್ಷೇತ್ರದಿಂದ ಮಾಜಿ ಶಾಸಕ  ಸತೀಶ ಕೆ. ಸೈಲ್ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಮಂಕಾಳ ವೈದ್ಯರನ್ನು ಅಭ್ಯರ್ಥಿಯೆಂದು ಪ್ರಕಟಿಸಲಾಗಿದೆ. ಈ ಮೂಲಕ ಕೈ ಪಡೆ ಚುನಾವಣಾ ಅಖಾಡಕ್ಕೆ ಇಳಿಯಲು ಸಿಧ್ಧವಾಗುತ್ತಿದ್ದು ಚುನಾವಣಾ ಕಣ ಕಾವೇರಲಿದೆ.                  

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Exit mobile version