ಕಾರವಾರ: ಬೋಟ್ ಮೂಲಕ ಗೋವಾದಿಂದ ಅಕ್ರಮ ಮದ್ಯಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಕರಾವಳಿ ಕಾವಲು ಪಡೆ ಪೊಲೀಸರು ಲಕ್ಷಾಂತರ ಮದ್ಯ ಹಾಗೂ ಸ್ವತ್ತನ್ನ ಮಾಜಾಳಿ ಸಮುದ್ರ ತೀರದಲ್ಲಿ ವಶಕ್ಕೆ ಪಡೆದಿದ್ದಾರೆ. ಗೋವಾದಿಂದ ಸಮುದ್ರದ ಮೂಲಕ ಬೋಟ್ ನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದಾಗ ಕರಾವಳಿ ಕಾವಲುಪಡೆ ಇನ್ಸ್ಪೆಕ್ಟರ್ ನಿಶ್ಚಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಅಕ್ರಮ ಗೋವಾ ಮದ್ಯ ಸೇರಿ 2.90 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆಯಲಾಗಿದೆ. ಕಾವಲುಪಡೆ ಪೊಲೀಸ್ ಕಂಡು ಬೋಟ್ ನಲ್ಲಿ ಇದ್ದ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಕಾರವಾರ ಕರಾವಳಿ ಕಾವಲುಪಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್, ಕಾರವಾರ