ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯುಲ್ಲಿ 330 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಅನುಗುಣವಾಗಿ 31,853/- ರೂಪಾಯಿ ಮಾಸಿಕ ವೇತನ ನಿಗದಿ ಮಾಡಲಾಗಿದೆ. ಕನಿಷ್ಠ 18 ವರ್ಷಗಳನ್ನು ಪೂರೈಸಿದ,ಎಸ್‌ಎಸ್‌ಎಲ್‌ಸಿ ಪೂರೈಸಿದವರು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಿಳಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 330 ಮೈನಿಂಗ್ ಸಿರ್ದಾರ್, ಎಲೆಕ್ಟ್ರಿಷನ್, ಡೆಪ್ಯುಟಿ ಸರ್ವೇಯರ್ ಮತ್ತು ಅಸಿಸ್ಟೆಂಟ್ ಪೋರ್ ಮೆನ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ , ಸಂದರ್ಶನ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಏಪ್ರಿಲ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕಂಪೆನಿ | CCL |
ಒಟ್ಟು ಹುದ್ದೆಗಳು | 330 |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 19 -04- 2023 |
ಅರ್ಜಿ ಸಲ್ಲಿಸುವ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಉದ್ಯೋಗದ ಕುರಿತ ಇನ್ನಷ್ಟು ಮಾಹಿತಿ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್