Important
Trending

ಕಾoಗ್ರೆಸ್ಸಿನ 2ನೇ ಪಟ್ಟಿ ಬಿಡುಗಡೆ: ಉತ್ತರಕನ್ನಡದ ಮತ್ತೆರಡು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಚುನಾವಣಾ ನೀತಿಸಂಹಿತೆ ಘೋಷಣೆಗೆ ಮುನ್ನವೇ ‘ಕೈ’ ಪಡೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಇದೀಗ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ.

ಕುತೂಹಲ ಕೆರಳಿಸಿದ್ದ ಶಿರಸಿ ವಿಧಾನಸಭಾ ಕ್ಷೇತ್ರಕ್ಕೆ ಭೀಮಣ್ಣ ನಾಯ್ಕ ಟಿಕೆಟ್ ಪಡೆದಿದ್ದರೆ, ಯಲ್ಲಾಪುರ ಕ್ಷೇತ್ರಕ್ಕೆ ವಿ.ಎಸ್.ಪಾಟೀಲ್ ಹೆಸರು ಅಂತಿಮಗೊoಡಿದೆ. ಇದುವರೆಗೂ 166 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಇನ್ನೂ 58 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button