ಬೆಂಗಳೂರು ಮೆಟ್ರೋ ರೈಲು ನಿಗಮ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 236 ಹುದ್ದೆಗಳು ಖಾಲಿಯಿದ್ದು, ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಹುದ್ದೆಗಳಿಗೆ ಅನುಗುಣವಾಗಿ ಐಟಿಐ ಅಥವಾ ಡಿಪ್ಲೊಮಾ, ಬಿಇ/ಬಿ.ಟೆಕ್ ಇಂಜಿನಿಯರಿoಗ್ ಅನ್ನು ಪೂರ್ಣಗೊಳಿಸಿರಬೇಕು. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 25 ಸಾವಿರದಿಂದ 95 ಸಾವಿರದ ವರೆಗೆ ಮಾಸಿಕ ವೇತನ ನಿಗದಿ ಪಡಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು ಎಂದು ಮಾಹಿತಿ ನೀಡಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರಿಲ್ 24 ಅರ್ಜಿ ಸಲ್ಲಿಸಲು ಕೊನೆಯದಿನವಾಗಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನದ ಮೇಲೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆ | 236 |
ಕಂಪೆನಿ | BMRCL |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 24-04-2023 |
ನೋಟಿಫಿಕೇಷನ್ ಒದಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,