ಬೆಂಗಳೂರಿನ ಆಸ್ಪತ್ರೆಗೆ ದಾಖಲು
ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ ಆಗಲು ಮನವಿ
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ನಿನ್ನೆ ಕರೊನಾ ಸೋಂಕು ದೃಢಪಟ್ಟ ಬೆನ್ನಲ್ಲೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪಾಸಿಟಿವ್ ಬಂದಿದೆ. ಕರೊನಾ ದೃಢಪಟ್ಟ ಹಿನ್ನಲೆಯಲ್ಲಿ ಅವರು ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕರೊನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನಗೆ ಕರೊನಾ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಕಳೆದ ಹಲವು ದಿನಗಳಿಂದ ನನ್ನ ಜೊತೆ ಹಲವರು ಸಂಪರ್ಕಕ್ಕೆ ಬಂದಿದ್ದಾರೆ. ನನ್ನ ಜೊತೆ ಸಂಪರ್ಕಕ್ಕೆ ಬಂದ ಎಲ್ಲರೂ ಕರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಳೆದ ಕೆಲ ದಿನಗಳಿಂದ ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿದ್ದರು. ನಿನ್ನೆ ಜ್ವರ ಕೂಡಾ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕರೊನಾ ಟೆಸ್ಟ್ ಗೆ ಒಳಗಾಗಿದ್ದರು.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.