Follow Us On

WhatsApp Group
Focus NewsImportant
Trending

ಶರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ: ಯುವತಿ ಶವ ಪತ್ತೆ: ಯುವಕನಿಗಾಗಿ ಹುಡುಕಾಟ

ಹೊನ್ನಾವರ: ಪಟ್ಟಣದ ಶರಾವತಿ ಸೇತುವೆ ಮೇಲಿಂದ ಇಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾತ್ರಿ ವೇಳೆ ಆಗಿದ್ದರಿಂದ ಜನದಟ್ಟಣೆ ಕಡಿಮೆ ಇರುವ ಕಾರಣಕ್ಕೆ ಇಬ್ಬರು ಸೇತುವೆ ಮೇಲಿಂದ ನದಿಗೆ ಹಾರಿದ್ದಾರೆ. ಇಬ್ಬರು ಪ್ರೇಮಿಗಳು ಇರಬಹುದು ಎಂಬ ಶಂಕೆ ಇದೆ. ಯುವತಿಯ ಶವವು ಶರಾವತಿ ನದಿಗೆ ಹೊಂದಿಕೊoಡಿರುವ ಟೊಂಕ ಸಮೀಪ ಮೃತ ದೇಹ ಸಿಕ್ಕಿದ್ದು, ಇನ್ನೊಬ್ಬರ ಪತ್ತೆ ಕಾರ್ಯ ಮುಂದುವರೆದಿದೆ.

BMRCL Recruitment: ಉದ್ಯೋಗಾವಕಾಶ: 236 ಹುದ್ದೆಗಳು ಖಾಲಿ: 25 ಸಾವಿರದಿಂದ 95 ಸಾವಿರದ ವರೆಗೆ ಮಾಸಿಕ ವೇತನ

ಸೇತುವೆ ಪಕ್ಕ ಇಬ್ಬರ ಚಪ್ಪಲಿ ಹಾಗೂ ಬ್ಯಾಗ್, ಬಸ್ ಪ್ರಯಾಣದ ಟಿಕೇಟ್ ಪತ್ತೆ ಆಗಿವೆ. ಹೊನ್ನಾವರದ ಶರಾವತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದವರ ಹುಡುಕಾಟ ನಡೆಸಿದ್ದು, ಯುವತಿಯ ಶವ ಪತ್ತೆಯಾಗಿದ್ದು, ನದಿಯಿಂದ ಹೊರ ತೆಗೆಯಲಾಗಿದೆ. ಇನ್ನೊಬ್ಬರ ಹುಡುಕಾಟ ಮುಂದುವರಿದಿದೆ. ಸೇತುವೆ ಬಳಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ,.ಸ್ಥಳಕ್ಕೆ ಹೊನ್ನಾವರ ಸಿ.ಪಿ.ಐ. ಮಂಜುನಾಥ ಇ.ಓ, ಪಿಎಸೈ ಪ್ರವೀಣಕುಮಾರ, ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿಗಳು ಕಾರ್ಯಚರಣೆ ಮುಂದುವರೆಸಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ ಹೊನ್ನಾವರ

Back to top button