ImportantJob News
Trending

EPFO Recruitment 2023: ಉದ್ಯೋಗಾವಕಾಶ: 2,859 ಹುದ್ದೆಗಳಿಗೆ ನೇಮಕಾತಿ: PUC, SSLC ಆದವರು ಅರ್ಜಿ ಸಲ್ಲಿಸಬಹುದು

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಇರುವ 2,859 ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ಭರ್ಜರಿ ನೇಮಾಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, 29,200 ರೂಪಾಯಿಗಳಿಂದ ಗಳಿಂದ 92,300 ರೂಪಾಯಿಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಒಟ್ಟು 2,859 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.

ಇಲಾಖೆEPFO
ಒಟ್ಟು ಹುದ್ದೆಗಳು2,859
ವಿದ್ಯಾರ್ಹತೆSSLC, PUC
ನೋಟಿಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್, ಕುಮಟಾ

Back to top button