Focus NewsImportant
Trending

ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ನಡುವೆ ಡಿಕ್ಕಿ: 10ಕ್ಕೂ ಅಧಿಕ ಮಂದಿಗೆ ಗಾಯ

ಹೊನ್ನಾವರ: ತಾಲೂಕಿನ ಕವಲಕ್ಕಿ ಸಮೀಪ ತುಪಾನ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡು ವಾಹನದ ಮುಂಭಾಗ ಸಂಪೂರ್ಣ ನುಜ್ಜಾದ ಘಟನೆ ನಡೆದಿದೆ. ಅತಿವೇಗ ಹಾಗೂ ಅಜಾಗರುಕತೆ ಚಾಲನೆಯಿಂದ ಈ ಅವಘಡ ಸಂಭವಿಸಿದೆ. ಅಪಘಾತದಿಂದ ಎರಡು ವಾಹನದಲ್ಲಿದ್ದ 10ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದವರು ಸಿದ್ದಾಪುರ ಮೂಲದವರು , ತುಪಾನನಲ್ಲಿದ್ದವರು ವಿಜಯಪುರ ಮೂಲದವರು ಎಂದು ತಿಳಿದುಬಂದಿದೆ. ಅಪಘಾದಿಂದ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕಾದರು, ಹೊನ್ನಾವರ ಪೊಲೀಸರು ಹಾಗೂ ಸಾರ್ವಜನಿಕರು ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಈ ಸಂಬoಧ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಹೊನ್ನಾವರ

Back to top button