Uttara Kannada
Trending

ಭಾರೀ ಮಳೆಯ ಮುನ್ನೆಚ್ಚರಿಕೆ

ಉತ್ತರಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ
ನದಿ ತೀರದಲ್ಲಿ ನೆರೆಯ ಆತಂಕ

[sliders_pack id=”1487″]

ಕಳೆದ ಮೂರ್ನಾಲ್ಕು ದಿನಗಳಿಂದ ಜೆಲ್ಲೆಯಾದ್ಯಂತ ಮಳೆ ರಾಯನ ಅಬ್ಬರ ಜೋರಾಗಿದ್ದು, ಬೆಂಬಿಡದೆ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದರ ಬೆನ್ನಲ್ಲೆ ಹವಾಮಾನ ಇಲಾಖೆ ಆಗಸ್ಟ್ 8ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವುದು ನದಿ ಪಾತ್ರದ ಜನರ ಆತಂಕ ಹೆಚ್ಚಿಸಿದೆ. ಈ ಸಂಬಂಧ ರೆಡ್ ಅಲರ್ಟ್ ಘೋಷಿಸಿರುವ ಹಮಾಮಾನ ಇಲಾಖೆ, ಮುಂದಿನ ಮೂರ್ನಾಲ್ಕು ದಿನಗಳ ವರೆಗೆ ಮಳೆ ಅಬ್ಬರಿಸುವ ಸಾಧ್ಯತೆಯಿದೆ ಎಂದಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಯಲ್ಲಿ ಈ ಸಂಬಂಧ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಶರಾವತಿ, ಅಘನಾಶಿನಿ ನದಿ ಮಳೆಯಿಂದಾಗಿ ಉಕ್ಕಿ ಹರಿಯಲಾರಂಭಿಸಿದೆ. ಹಲವೆಡೆ ಜನ ಜೀವ ಅಸ್ಥವ್ಯಸ್ಥಗೊಳ್ಳುವ ಸ್ಥಿತಿ ನಿರ್ಮಾಣವಾಗುತ್ತಿದೆ. ಕಳೆದ ಭಾರಿ ಸಂಭವಿಸಿದ ನೆರೆಹಾವಳಿ ಮತ್ತೆ ಮರುಕಳಿಸುವ ಆತಂಕ ನದಿಪಾತ್ರದ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಈಗಾಗಲೇ ಜಿಲ್ಲಾಡಳಿತ, ತಾಲೂಕಾಡಳಿತ ನೆರೆ ಪರಿಸ್ಥಿತಿಯನ್ನು ಎದುರಿಸಿಲು ಸಜ್ಜಾಗಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button