ಖಾಸಗಿ ಬಸ್ ಪಲ್ಟಿ: ಹಲವರಿಗೆ ಗಾಯ:ಕಾರ್ ಗೆ ಡಿಕ್ಕಿಹೊಡೆದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್

ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ VRL ಬಸ್ ಪಲ್ಟಿಯಾಗಿ ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಈ ಖಾಸಗಿ ಬಸ್ ನಲ್ಲಿ ಸುಮಾರು 36ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಮಂಕಿ ಸಮೀಪ ಬಸ್ ಚಾಲಕ ಕಾರ ಒಂದಕ್ಕೆ ಡಿಕ್ಕಿ ಹೊಡೆದು ನಿಯಂತ್ರ ತಪ್ಪಿದ್ದರಿಂದ ಬಸ್ ಹೆದ್ದಾರಿ ಪಕ್ಕದಲ್ಲಿ ಪಲ್ಟಿ ಆಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನ ಭಟ್ಕಳ ಮತ್ತು ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಸ್ಥಳೀಯ ಮಂಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Exit mobile version