ಟೆಂಪೋ, ರಿಕ್ಷಾ ನಡುವೆ ಡಿಕ್ಕಿ: ರಿಕ್ಷಾ ಚಾಲಕನಿಗೆ ಗಾಯ

ಕಾರವಾರ: ಟೆಂಪೋ ಹಾಗೂ ಲಗೇಜ್ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ನಗರದ ಬಿಣಗಾ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಅಂಕೋಲಾದಿಂದ ಕಾರವಾರ ಕಡೆ ಪ್ರಯಾಣಿಕರನ್ನು ಕರೆತರುತ್ತಿದ್ದ ಟೆಂಪೋ ಹಾಗೂ ಅಂಕೋಲಾ ಕಡೆ ತೆರಳುತ್ತಿದ್ದ ಲಗೇಜ್ ರಿಕ್ಷಾ ನಡುವೆ ಮುಖಾ ಮುಖಿ ಡಿಕ್ಕಿಯಾಗಿದೆ.

ಅಪಘಾತದ ರಬಸಕ್ಕೆ ರಿಕ್ಷಾ ಪಲ್ಟಿಯಾಗಿ ಮುಂಭಾಗ ನುಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ಗಾಯಗೊಂಡಿದ್ದಾನೆ. ತಕ್ಷಣ ಆತನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಸಮಸ್ಯೆ ಏರ್ಪಟ್ಟಿತ್ತು.

ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ. ಈ ಬಗ್ಗೆ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ , ಕಾರವಾರ

Exit mobile version