ImportantJob News
Trending

SSC CHSL Recruitment 2023: ಉದ್ಯೋಗಾವಕಾಶ: 81 ಸಾವಿರದ ವರೆಗೆ ಸಂಬಳ: 1,600 ಹುದ್ದೆಗಳಿಗೆ ನೇಮಕಾತಿ

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಸುಮಾರು 1600 ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿoದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಧಿಸೂಚನೆಯಂತೆ ಮಾಸಿಕ ವೇತನ ಶ್ರೇಣಿ 81 ಸಾವಿರದ ವರೆಗೆ ಇದ್ದು, ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ಟೈಪಿಂಗ್ ಟೆಸ್ಟ್ , ದಾಖಲೆಗಳ ಪರಿಶೀಲನೆ ನಡೆಸಿ ನೇಮಕಾತಿ ನಡೆಯಲಿದೆ.

ಶಿವಮೊಗ್ಗ ಮತ್ತು ಉಡುಪಿ, ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರಿನಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ , ಎಸ್ಸಿ, ಎಸ್ಟಿ, ಯವರಿಗೆ ಶುಲ್ಕ ವಿನಾಯಿತಿ ಇದ್ದು, ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕಿದೆ.

ಅರ್ಜಿ ಸಲ್ಲಿಕೆ ಆರಂಭ09-05-2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನ08-06-2023
ಕಂಪೆನಿSSC CHSL
ಹುದ್ದೆಗಳು1,600
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿ ಓದಲು ಇಲ್ಲಿ ಕ್ಲಿಕ್ ಮಾಡಿ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button