Follow Us On

WhatsApp Group
Focus NewsImportant
Trending

ಗುತ್ತಿಗೆದಾರ ನೇಣು ಬಿಗಿದುಕೊಂಡು ಆತ್ಮಹತ್ಯೆ

ಭಟ್ಕಳ: ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿಯಲ್ಲಿ  ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರನನ್ನು ದಿನೇಶ ತಂದೆ ಮಂಜಪ್ಪ ನಾಯ್ಕ  28 ವರ್ಷ  ಶಿರಾಲಿ ಮಣ್ಣಹೊಂಡ ನಿವಾಸಿ ಎಂದು ಗುರುತಿಸಲಾಗಿದೆ. ಈತ

ರಸ್ತೆ ಮತ್ತು ಇನ್ನಿತರ ಕಾಮಗಾರಿಯನ್ನು  ಗುತ್ತಿಗೆ ಪಡೆದು ಕೆಲಸ ಮಾಡಿಕೊಂಡಿದ್ದು ಕೆಲಸಕ್ಕೆ ಬೆಳಿಗ್ಗೆ ಮನೆಯಿಂದ ಹೋದವನು ಮನೆಗೆ ಬಾರದೆ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ವಿಕೊಂಡು ಬಾಕಡಕೇರಿ ಸ್ಮಶಾನದ ಸಮೀಪ ಗೇರು ಮರಕ್ಕೆ ನೈಲಾನ್ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. 

ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಮೃತನ ಅಣ್ಣ ಸುಬ್ರಾಯ ನಾಯ್ಕ ದೂರು ನೀಡಿದ್ದು ದೂರನ್ನು ದಾಖಲಿಸಿ ಕೊಂಡ ಪಿ.ಎಸ್.ಐ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದು, ಮೃತ ದೇಹವನ್ನ ಮುರ್ಡೇಶ್ವರ ಆಸ್ಪತ್ರೆಗೆ ರವಾನಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕಕುಟುಂಬದವರಿಗೆ ಹಸ್ತಾಂತರ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಪೊಲೀಸ ತನಿಖೆಯಿಂದ ತಿಳಿದು ಬರಬೇಕಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button