ಸರಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿವಾಹಿತೆ ಸಾವಿಗೆ ಶರಣು

ಕುಮಟಾ: ಅನಾರೋಗ್ಯದ ಸಮಸ್ಯೆಯನ್ನು ಮನಸ್ಸಿಗೆ ಹಚ್ಚಿಕೊಂಡು ಕುಮಟಾ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆಯ ಆಧಾರದ ಮೇಲೆ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿವಾಹಿತೆಯೊಬ್ಬಳು ತಾವು ವಾಸವಿದ್ದ ಪಟ್ಟಣದ ಹೆರವಟ್ಟಾದ ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ವೀಣಾ ಹುಲಿಗೆಮ್ಮನವರ್ (26) ಎಂದು ಗುರುತಿಸಲಾಗಿದೆ. ಮೂಲತಃ ಹಾವೇರಿಯ ಹಾನಗಲ್ ತಾಲೂಕಿನವಳಾದ ಈಕೆ ಕುಮಟಾದ ಸರಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದಳು. ಪತಿಯೊಟ್ಟಿಗೆ ಕುಮಟಾದ ಹೆರವಟ್ಟಾದಲ್ಲಿ ಬಾಡಿಗೆಮನೆಯೊಂದರಲ್ಲಿ ವಾಸವಿದ್ದ ಈಕೆ ಒಂದುವರೆ ತಿಂಗಳ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಶುಗರ್ ಹೆಚ್ಚಾಗಿ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆಯಲ್ಲಿ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮೆನೆಯ ಕೋಣೆಯೊಳಗೆ ಪ್ಯಾನಿಗೆ ವೇಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮ ಹತ್ಯೆಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತಾಗಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯೋಗೀಶ್ ಮಡಿವಾಳ ಕುಮಟಾ

Exit mobile version