ಉತ್ತರಕನ್ನಡದ ಎಲ್ಲೆಡೆ ಶಕ್ತಿ ಯೋಜನೆ ಶುಭಾರಂಭ: ಶಿರಸಿಯಲ್ಲಿ ಶಾಸಕ ಭೀಮಣ್ಣ ನಾಯ್ಕ ಚಾಲನೆ
ಶಿರಸಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭಾನುವಾರ ರಾಜ್ಯಾದ್ಯಂತ ಚಾಲನೆ ದೊರಕಿದೆ.ಚುನಾವಣಾ ಪೂರ್ವ ದಲ್ಲಿ ನೀಡಿದ ಆಶ್ವಾಸನೆ ಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಿದೆ ಎಂದು ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಹೇಳಿದರು.ಭಾನುವಾರ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆ ಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದೆ.ಶಿರಸಿಯಲ್ಲೂ ಸಹ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಇದೊಂದು ಅರ್ಥಪೂರ್ಣ ಯೋಜನೆಯಾಗಿದ್ದು ರಾಜ್ಯದಲ್ಲಿರುವ ಮಹಿಳೆಯರ ಕಷ್ಟವನ್ನು ಗುರುತಿಸಿ ಈಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯೂ ಶಕ್ತಿ ಯೋಜನೆ ಯ ಸದುಪಯೋಗ ಪಡಿಸಿಕೊಳ್ಳಬಹುದು.
ಚುನಾವಣೆ ಪೂರ್ವ ದಲ್ಲಿ ನೀಡಿದ ಘೋಷಣೆ ಗಳಲ್ಲಿ ಶಕ್ತಿಯೋಜನೆಯೂ ಒಂದು.ಕೊಟ್ಟ ಭರವಸೆಯನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿ ಯಾಗಿದೆ. ಗುರುತಿನ ಚೀಟಿ ಯನ್ನು ತೋರಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಮಹಿಳೆ ಯರು ಉಚಿತ ಪ್ರಯಾಣ ಮಾಡಬಹುದು. ಸರಿಯಾದ ರೀತಿಯಲ್ಲಿ ಶಕ್ತಿಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ ಜವಾಬ್ದಾರಿ ಸಾರ್ವಜನಿಕರ ಮೇಲಿದೆ ಎಂದರು., ಉಪವಿಭಾಗಾಧಿಕಾರಿ ದೇವರಾಜ್ ಆರ್, ಶಿರಸಿ ಘಟಕ ವ್ಯವಸ್ಥಾಪಕ ಸರ್ವೇಶ ನಾಯ್ಕ,ನಗರ ಠಾಣೆ ಪಿಎಸ್ಐ ರಾಜಕುಮಾರ್, ನಗರಸಭೆ ಸದಸ್ಯರಾದ ಪ್ರದೀಪ್ ಶೆಟ್ಟಿ,ಮಾನಿಲಿ ಶೆಟ್ಟಿ ಸೇರಿ ಹಲವರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್, ಶಿರಸಿ