Railway Recruitment 2023 : SSLC , ITI ಪಾಸಾದವರು ಅರ್ಜಿ ಸಲ್ಲಿಸಬಹುದು

ಭಾರತೀಯ ರೈಲ್ವೆ ಅಡುಗೆ & ಪ್ರವಾಸೋದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯ ಪ್ರಕಟವಾಗಿದ್ದು, ಎಸ್ಸೆಸ್ಸಲ್ಸಿ, ಐಟಿಐ, ಕಾಮರ್ಸ್ ನಲ್ಲಿ ಚಾರ್ಟೆಡ್ ಅಕೌಂಟೆoಟ್, ಹಾಗೂ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮಾಸಿಕ ವೇತನ 5 ಸಾವಿರದಿಂದ 9 ಸಾವಿರ ಇದ್ದು, ಕನಿಷ್ಠ 15 ವರ್ಷ ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳ ಸಂಖ್ಯೆ 16.

ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 05 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಅಂಗವಿಕಲ ಹಾಗೂ ಮಾಜಿ ಸಾಯಕ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಮಾಹಿತಿ ನೀಡಲಾಗಿದ್ದು, ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಒಟ್ಟು ಹುದ್ದೆಗಳು16
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ15-07-2023
ನೋಟೀಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version