Follow Us On

WhatsApp Group
ImportantJob News
Trending

KFCSC Recruitment: 386 ಹುದ್ದೆಗಳು: 83 ಸಾವಿರದ ವರೆಗೆ ಸಂಬಳ: ಪಿಯುಸಿ, ಪದವಿ ಆದವರು ಅರ್ಜಿ ಸಲ್ಲಿಸಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಿಂದ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಒಟ್ಟು 386 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಧಿಸೂಚನೆಯಂತೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ಆರಂಭಿಕ ವೇತನ, 21,400 ಸಾವಿರದಿಂದ 83,900 ವರೆಗೆ ವೇತನ ನಿಗದಿಪಡಿಸಲಾಗಿದೆ. ಪಿಯುಸಿ, ಪದವಿ, ಕಾಮರ್ಸ್ ನಲ್ಲಿ ಪದವಿ, ಕೃಷಿ ವಿಜ್ಞಾನದಲ್ಲಿ ಪದವಿ, ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಹಾಯಕ ವ್ಯವಸ್ಥಾಪಕ 10, ಹಿರಿಯ ಸಹಾಯಕರು 57, ಹಿರಿಯ ಸಹಾಯಕರು-ಲೆಕ್ಕ, ಕ್ವಾಲಿಟಿ ಇನ್ಸ್ಪೆಕ್ಟರ್ 23, ಕಿರಿಯ ಸಹಾಯಕರು 263 ಸೇರಿ ಒಟ್ಟು 386 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಕನಿಷ್ಠ 18 ವರ್ಷ ತುಂಬಿದ ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇಲಾಖೆಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ22-07-2023
ಅರ್ಜಿ ಸಲ್ಲಿಸುವ ಬಗೆOnline
ನೋಟೀಫಿಕೇಷನ್ ನೋಡಲುಇಲ್ಲಿ ಕ್ಲಿಕ್ ಮಾಡಿ

ಇನ್ನು ಹೆಚ್ಚಿನ ಉದ್ಯೋಗದ ಕುರಿತು ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button