Follow Us On

Google News
Big News
Trending

ಹಲವು ರಾಜ್ಯಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ದೆಹಲಿ: ಮುಂದಿನ ನಾಲ್ಕೈದು ದಿನಗಳ ವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಕೆಲ ಭಾಗಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ, ಮಹಾರಾಷ್ಟ್ರ , ಗೋವಾ , ರಾಜಸ್ಥಾನ, ಉತ್ತರಾಖಂಡ, ಹಿಮಾಚಲ ಪ್ರದೇಶ, , ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯುಂಟಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ,

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button