Follow Us On

WhatsApp Group
Important
Trending

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ

ಅಂಕೋಲಾ: ಮನೆಯಿಂದ ಹೊರ ಹೋದ ವ್ಯಕ್ತಿಯೋರ್ವ ಮನೆಗೆ ಮರಳದೇ, ಊರಿನ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹವಾಗಿ ಪತ್ತೆಯಾದ ಘಟನೆ ಗುರುವಾರ ತಾಲೂಕಿನ ಬ್ರಹ್ಮೂರಿನಲ್ಲಿ ನಡೆದಿದೆ.  ಬ್ರಹ್ಮೂರು ನಿವಾಸಿ ಶಿವರಾಮ ಟಿ ಮರಾಠೆ (48) ಮೃತ ದುರ್ದೈವಿಯಾಗಿದ್ದು ಈತ ಕಳೆದ ಮೂರು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋದವನು, ಮರಳಿ ಬಂದಿರಲಿಲ್ಲ. 

KFCSC Recruitment: 386 ಹುದ್ದೆಗಳು: 83 ಸಾವಿರದ ವರೆಗೆ ಸಂಬಳ: ಪಿಯುಸಿ, ಪದವಿ ಆದವರು ಅರ್ಜಿ ಸಲ್ಲಿಸಿ

ಆತಂಕ ಗೊಂಡ ಆತನ ಕುಟುಂಬಸ್ಥರು, ಸಂಬಂಧಿಗಳು,ಊರವರು ಸೇರಿ ಎಲ್ಲಾ ಕಡೆ ಹುಡುಕಾಟ ನಡೆಸುತ್ತಿದ್ದರು.  ಗುರುವಾರ ಬೆಳಗ್ಗೆ ಸಮೀಪದ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ. ತಂದೆ- ತಾಯಿ ತೀರಿಕೊಂಡ ನಂತರ ಅಥವಾ ಅದಾವುದೋ ಕಾರಣದಿಂದ ಮನ ನೊಂದು ವಿಪರೀತ ಸರಾಯಿ ಕುಡಿಯುತ್ತಿದ್ದ ಎನ್ನಲಾದ ಈತ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅಂದಾಜಿಸಲಾಗಿದೆ. ನಿಖರ ಕಾರಣ ತಿಳಿದು ಬರಬೇಕಿದೆ.

ಅಂಕೋಲಾ ಪಿ.ಎಸ್. ಐ ಉದ್ದಪ್ಪ ಎ.ಡಿ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಘಟನಾ ಸ್ಥಳದಿಂದ, ತಾಲೂಕಾ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಕನಸಿಗದ್ದೆಯ ವಿಜಯ ಕುಮಾರ ನಾಯ್ಕ, ಬ್ರಹ್ಮೂರ ಗ್ರಾಮದ ಸ್ಥಳೀಯರು ಸಹಕರಿಸಿದರು. ಗ್ರಾಮೀಣ ಪ್ರದೇಶದ ಅನೇಕ ಕಡೆ ಬೇಕಾಬಿಟ್ಟಿ ಸರಾಯಿ ಮಾರಾಟ ಮಾಡುತ್ತಾರೆ ಎನ್ನಲಾಗಿದ್ದು ಈ ಕುರಿತು ಸಂಬಂಧಿಸಿದ ಇಲಾಖೆಗಳು ಕಣ್ಮುಚ್ಚಿ ಕುಳಿತು ಕೊಳ್ಳುವುದು ಸರಿಯಲ್ಲ ಎಂಬ ಮಾತು  ಸ್ಥಳೀಯ ಕೆಲವರಿಂದ  ಕೇಳಿ ಬಂದಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button