![](http://i0.wp.com/vismaya24x7.com/wp-content/uploads/2023/07/sirsi-death.jpg?fit=1280%2C720&ssl=1)
ಶಿರಸಿ: ಆನ್‌ಲೈನ್ ಗೇಮ್ ಚಟಕ್ಕೆ ಬಲಿಯಾದ ಯುವಕನೊಬ್ಬ ಲಕ್ಷಾಂತರ ರೂಪಾಯಿ ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕುಳವೆಯಲ್ಲಿ ಸಂಭವಿಸಿದೆ. ಬಾಳೆತೋಟ ನಿವಾಸಿ ವಿಜೇತ ಶಾಂತಾರಾಮ ಹೆಗಡೆ (37) ಆತ್ಮಹತ್ಯೆಗೆ ಶರಣಾದ ಯುವಕ ಎಂದು ತಿಳಿದುಬಂದಿದೆ.
ಈತ ಆನ್ ಲೈನ್ ಗೇಮ್ ಚಟಕ್ಕೆ ಬಲಿಯಾಗಿ ಸುಮಾರು 65 ಲಕ್ಷ ರೂಪಾಯಿ ಪಾವತಿಸಬೇಕಾಗಿತ್ತು. ಆದರೆ ಅಷ್ಟೊಂದು ಹಣ ಅವನ ಬಳಿ ಇರಲಿಲ್ಲ. ಈ ಕಾರಣಕ್ಕೆ ಬೆಂಗಳೂರು ತೊರೆದು ಶಿರಸಿಯ ತನ್ನ ಊರಾದ ಬಾಳೆತೋಟಕ್ಕೆ ಬಂದು ಉಳಿದು ಕೊಂಡಿದ್ದ ಎನ್ನಲಾಗಿದೆ.
ರಾತ್ರಿ ಬೆಂಗಳೂರಿಗೆ ತೆರಳುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ಬೆಂಗಳೂರಿಗೆ ತೆರಳದೇ ಪುನಃ ವಾಪಸ್ ಮನೆಗೆ ಬಾರದೇ ಕುಳವೆ ಅರಣ್ಯ ಪ್ರದೇಶದಲ್ಲಿ ಸಾವಿಗೆ ಶರಣಾಗಿದ್ದಾನೆ. ಈತ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿದ್ದ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಶಿರಸಿ