Focus News
Trending

ಅಂಕೋಲಾ: ಜುಲೈ 4  ಮತ್ತು ಜುಲೈ 5 ರಂದು ಬೆಳಿಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆ ವರೆಗೆ ವಿದ್ಯುತ್ ವ್ಯತ್ಯಯ

ಅಂಕೋಲಾ : ಪಟ್ಟಣದ ಹುಲಿದೇವರವಾಡದ ಸಾಲು ಮರದ ತಿಮ್ಮಕ್ಕ ಉದ್ಯಾನವನದ ಹತ್ತಿರ 33 ಕೆ.ವಿ ಸ್ಟೇಷನ್ ನ  2  ಹೊಸ ಗೋಪುರಗಳ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜುಲೈ 4  ಮತ್ತು ಜುಲೈ 5 ರಂದು ಬೆಳಿಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗುವ ಸಂಭವವಿದೆ ಎಂದು ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಪರ್ಯಾಯವಾಗಿ ಕುಮಟಾ ಉಪವಿಭಾಗ ಕೇಂದ್ರದಿಂದ ವಿದ್ಯುತ್ ಸರಬರಾಜು ನೀಡಲಾಗುವುದಾದರೂ  ಅಂಕೋಲಾದ ಎಲ್ಲಾ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ತಿನ ವ್ಯತ್ಯಯ ಉಂಟಾದಲ್ಲಿ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಇಲಾಖೆ ಪರವಾಗಿ ಪತ್ರಿಕಾ ಪ್ರಕಟನೆಯಲ್ಲಿ  ಕೋರಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button