ImportantJob News
Trending

IBPS Recruitment 2023: 4045 ಹುದ್ದೆಗಳಿಗೆ ನೇಮಕಾತಿ: ಪದವಿ ಪಡೆದವರು ಅರ್ಜಿ ಸಲ್ಲಿಸಿ

ಬ್ಯಾಂಕ್‌ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶ ಒದಗಿ ಬಂದಿದ್ದು, ಬ್ಯಾಂಕಿoಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ 2024-25 ನೇ ಸಾಲಿಗೆ ನೇಮಕಾತಿ ಮಾಡಿಕೊಳ್ಳಲು ದೇಶಾದ್ಯಂತ ವಿವಿಧ ಬ್ಯಾಂಕ್‌ಗಳ ಒಟ್ಟು 4, 045 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಹೌದು, ಬ್ಯಾಂಕಿoಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ವಿವಿಧ ಬ್ಯಾಂಕ್ ಗಳಲ್ಲಿ ಖಾಲಿ ಇರುವ 4045 ಕ್ಲರ್ಕ್​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಕರ್ಷಕ ಸಂಬಳ ಇರಲಿದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 21 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿದೆ. ಕರ್ನಾಟಕದಲ್ಲಿ ಒಟ್ಟು 88 ಹುದ್ದೆಗಳು ಖಾಲಿ ಇದ್ದು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ- 61, ಪಂಜಾಬ್ ನ್ಯಾಷನಲ್ ಬ್ಯಾಂಕ್- 15, ಪಂಜಾಬ್ & ಸಿಂಧ್ ಬ್ಯಾಂಕ್- 9, ಬ್ಯಾಂಕ್ ಆಫ್ ಇಂಡಿಯಾ- 3 ಹುದ್ದೆಗಳಿಗೆ ನೇಮಕಾರಿ ನಡೆಯಲಿದೆ. ಆನ್​ಲೈನ್ ಮೂಲಕ ಮಾತ್ರ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶವಿದೆ.

ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಬೀದರ್, ದಾವಣಗೆರೆ, ಗುಲ್ಬರ್ಗಾ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ಎಕ್ಸಾಮಿನೇಷನ್ ಸೆಂಟರ್ ತೆರೆಯಾಗುತ್ತದೆ.

ಒಟ್ಟು ಹುದ್ದೆಗಳು4045
ಸಂಸ್ಥೆIBPS
ನೋಟೀಫಿಕೇಷನ್ ಓದಲುಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಯ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ21-07-2023

ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತು ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button