ಕಾರವಾರ: ಕಳೆದ ಮೂರು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಲವಾರು ಅವಾಂತರಗಳನ್ನು ಸೃಷ್ಠಿಸಿದ್ದು, ಜನರು ಮಳೆಯ ಆರ್ಭಟಕ್ಕೆ ತತ್ತರಿಸಿ ಹೋಗುವಂತಾಗಿದೆ. ಸುರಿಯುತ್ತಿರುವ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಜನ ಜೀವನ ಅಸ್ತವ್ಯಸ್ಥವಾಗಿದ್ದು, ರಸ್ತೆ ದಾಟಿ ಬಂದ ನೀರು ಊರು, ಕೇರಿಗಳ ಮನೆಗಳಿಗೆ ನುಗ್ಗಿ ಅವಾಂತರಗಳನ್ನು ಉಂಟು ಮಾಡಿದೆ.
ಭಾರೀ ಮಳೆಯ ಕಾರಣ ಜಿಲ್ಲೆಯ ಬಹುತೇಕ ಎಲ್ಲಾ ಜಲಾಶಯಗಳು ಭರ್ತಿಯಾಗುವ ಹಂತಕ್ಕೆ ಬಂದಿದ್ದು, ವಿದ್ಯುತ್ ಉತ್ಪಾದನೆಯ ಮೂಲಕ ಹೊರ ಹರಿವು ಹೆಚ್ಚಿಸಲಾಗಿದೆ. ಆದರೆ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಲ್ಲಿ ಇದುವರೆಗು ಮಳೆಯ ಅಬ್ಬರಕಡಿಮೆ ಇರುವ ಕಾರಣ ಕರಾವಳಿಯಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಜುಲೈ 10 ರ ವರೆಗೂ ಭಾರೀ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯೂ ಸೇರಿದಂತೆ ಕರಾವಳಿಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬ್ಯೂರೋ ರಿಪೋರ್ಟ ವಿಸ್ಮಯ ನ್ಯೂಸ್