ಆಸ್ಪತ್ರೆಯಿಂದ ಯುವಕ ನಾಪತ್ತೆ: ಮಾಹಿತಿ ನೀಡುವಂತೆ ಮನವಿ

ಶಿರಸಿ: ನಗರದ ಆಸ್ಪತ್ರೆಯಿಂದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ಟಿ.ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಕ್ಷಿತ್ ರಾಮು (21) ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ. ಗೋಧಿ ಮೈಬಣ್ಣ, ಸದೃಢ ಮೈಕಟ್ಟು, 5.9 ಅಡಿ ಎತ್ತರ, ಕನ್ನಡ, ಹಿಂದಿ, ಇಂಗ್ಲೀಷ್ ಮಾತನಾಡುತ್ತಾನೆ ಎಂದು ತಿಳಿದುಬಂದಿದೆ. ಈತನ ಬಗ್ಗೆ ಮಾಹಿತಿ ಇದ್ದಲ್ಲಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡವಂತೆ ಸೂಚಿಸಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

Exit mobile version