ಅಂಕೋಲಾ: ತಾಲೂಕಿನ ರಾಮನಗುಳಿಯ ರಾಮಪಾದುಕಾ ದೇವಸ್ಥಾನ ಹಾಗೂ ಅರಬೈಲ್ ನ ಮಾರುತಿ ದೇವಸ್ಥಾನದಿಂದ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಿ ರಾಮಜನ್ಮಭೂಮಿ ಅಯೋಧ್ಯೆಗೆ ಕಳುಹಿಸಿಕೊಡುವ ಕಾರ್ಯ ವೇ.ಗಣಪತಿ ಭಟ್ ರ ನೇತೃತ್ವದಲ್ಲಿ ನೆರವೇರಿಸಲಾಯಿತು.
ಇದಕ್ಕೂ ಪೂರ್ವ ದೇವಸ್ಥಾನವನ್ನು ಸ್ವಚ್ಛಗೊಳಿಸಿ ನಂತರದಲ್ಲಿ ಮೃತ್ತಿಕೆಗೆ ಪೂಜೆ ಸಲ್ಲಿಸಿ ರಾಮಪಾದುಕಾ ದೇವಸ್ಥಾನ ಹಾಗೂ ಮಾರುತಿ ದೇವಸ್ಥಾನ ಈ ಎರಡೂ ಮಂದಿರದ ಮೃತ್ತಿಕೆಯನ್ನು ಸಂಗ್ರಹಿಸಿ ಉತ್ತರ ಪ್ರದೇಶದಲ್ಲಿರುವ ರಾಮ ಜನ್ಮಭೂಮಿ ಅಯೋಧ್ಯೆಗೆ ಕಳುಹಿಸಿಕೊಡುವ ಕಾರ್ಯ ಮಾಡಲಾಯಿತು. ಶತಮಾನಗಳ ಕನಸಾಗಿದ್ದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು ಈ ವರ್ಷಾಂತ್ಯಕ್ಕೆ ಮಂದಿರ ನಿರ್ಮಾಣ ಪೂರ್ಣಗೊಂಡು ಜನವರಿಯಲ್ಲಿ ದೇವರ ಪ್ರತಿಷ್ಠಾಪನಾ ಕಾರ್ಯ ನೇರವೇರಲಿದೆ ಎಂಬ ಮಾಹಿತಿ ಇದೆ. ಮೃತ್ತಿಕೆ ಸಂಗ್ರಹ ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು, ಊರಿನ ಗ್ರಾಮಸ್ಥರು ಭಾಗವಹಿಸಿದ್ದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ