Focus News
Trending

ತೆಂಗು ಬೆಳೆಗಾರರ ಹಿತರಕ್ಷಣೆಗೆ ಮುಂದಾಗುವಂತೆ ಪ್ರಾಂತ ರೈತ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹ

ಅಂಕೋಲಾ: ಬೆಲೆ ಕುಸಿತದಿಂದಾಗಿ ಕಂಗಾಲಾಗಿರುವ ತೆಂಗು ಬೆಳೆಗಾರರ ಹಿತದೃಷ್ಟಿಯಿಂದ ಕೊಬ್ಬರಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ತೆಂಗು ಬೆಳೆಗಾರರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ತಹಶೀಲ್ಧಾರರ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರದ ತಪ್ಪು ಆಮದು ನೀತಿ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಧೋರಣೆಯಿಂದಾಗಿ ಇಂದು ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದು ಕೊಬ್ಬರಿ ಬೆಲೆ ಕ್ವಿಂಟಾಲಿಗೆ 6 ರಿಂದ 7 ಸಾವಿರಕ್ಕೆ ಬಂದು ತಲುಪಿದೆ.

ರಾಜ್ಯ ತೋಟಗಾರಿಕೆ ಇಲಾಖೆ ಇಲಾಖೆ ಕೇಂದ್ರ ಸರ್ಕಾರದ ಕೃಷಿ ವೆಚ್ಚ ಮತ್ತು ದರ ಆಯೋಗಕ್ಕೆ ಕೊಬ್ಬರಿಗೆ ಪ್ರತಿ ಕ್ವಿಂಟಾಲಿಗೆ 16730 ರೂಪಾಯಿ ನೀಡಬೇಕು ಎಂದು ಉತ್ಪಾದನಾ ವೆಚ್ಚದ ಆಧಾರದಲ್ಲಿ ಶಿಫಾರಸ್ಸು ಮಾಡಿದೆ ಆದರೂ ಕೇಂದ್ರ ಸರ್ಕಾರದಿಂದ ಬೆಂಬಲ ಬೆಲೆಯಾಗಿ ಕೇವಲ 11750 ರೂಪಾಯಿ ಮಾತ್ರ ನಿಗದಿ ಮಾಡಲಾಗಿದೆ ರಾಜ್ಯ ಸರ್ಕಾರ ಹೆಚ್ಚುವರಿ 1250 ರೂಪಾಯಿ ನಿಗದಿಪಡಿಸಿದೆ ಆದರೆ ಯಾವುದೇ ಖರೀದಿ ಕೇಂದ್ರಗಳನ್ನು ತೆರೆಯದೇ ಇರುವುದರಿಂದ ರೈತರಿಗೆ ಬೆಂಬಲ ಬೆಲೆಯ ಲಾಭ ಸಿಗದೇ ಕಡಿಮೆ ಬೆಲೆಗೆ ಕೊಬ್ಬರಿ ಮಾರಾಟ ಮಾಡುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದ್ದರಿಂದ ತಕ್ಷಣ ಕೊಬ್ಬರಿ ಖರೀದಿಸಲು ಹೆಚ್ಚಿನ ಕೇಂದ್ರಗಳನ್ನು ತೆರೆದು ಪ್ರತಿ ಕ್ವಿಂಟಾಲಿಗೆ 16730 ರೂಪಾಯಿ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ
ತಹಶೀಲ್ಧಾರ ಪ್ರವೀಣ ಹುಚ್ಚಣ್ಣನವರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಪ್ರಮುಖರಾದ ಗೌರೀಶ ನಾಯಕ, ಸಂತೋಷ ನಾಯ್ಕ, ಮಾದೇವ ಗೌಡ, ಲಕ್ಷ್ಮಣ ನಾಯಕ, ಉದಯ ನಾಯ್ಕ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Back to top button