Follow Us On

Google News
Focus News
Trending

ಜುಲೈ 20 ರಂದು ಅಂಕೋಲಾದಲ್ಲಿ ರಾಜ್ಯ ಮಟ್ಟದ ಸಮ್ಮೇಳನ: ಗ್ರಾಮೀಣ ಉದ್ಯಮಶೀಲತೆಯ ಅವಕಾಶಗಳು ಮತ್ತು ಸವಾಲುಗಳ ಕುರಿತು ವಿಶೇಷ ಸೆಮಿನಾರ್

ಪೂಜಗೇರಿ ಸ.ಪ್ರ ದರ್ಜೆ ಕಾಲೇಜಿನಲ್ಲಿ ಆಯೋಜನೆ

ಅಂಕೋಲಾ: ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಮಂಡಳಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪೂಜಗೇರಿಯ ಪ್ಲೇಸಮೆಂಟ್ ಸೆಲ್ ಮತ್ತು ಐಕ್ಯುಎಸಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಉದ್ಯಮಶೀಲತೆಯ ಅವಕಾಶಗಳು ಮತ್ತು ಸವಾಲುಗಳು ಕುರಿತು ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನ ಜುಲೈ 20 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯಮಶೀಲತೆಯ ಅವಕಾಶಗಳು, ಸ್ಥಳೀಯವಾಗಿ ಲಭ್ಯ ಸಂಪನ್ಮೂಲಗಳನ್ನು ಬಳಸಿ ಉದ್ಯಮಗಳ ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿ ಆರ್ಥಿಕ ಸದೃಡತೆಯ ಕುರಿತು ಯುವ ಜನರಿಗೆ ಉತ್ತೇಜನ ನೀಡುವ ದಿಶೆಯಲ್ಲಿ ಹಮ್ಮಿಕೊಳ್ಳಲಾಗಿರುವ ಸಮ್ಮೇಳನದಲ್ಲಿ ಕಾರವಾರ ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್, ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಎಸ್. ಬಿ.ಅಪ್ಪಾಜಿಗೌಡ, ಜಂಟಿ ನಿರ್ದೇಶಕ ಡಾ.ಪಿ.ಬಿ.ಕಲ್ಯಾಣಶೆಟ್ಟ ಪಾಲ್ಗೊಳ್ಳಲಿದ್ದು ಕೃಷಿಯಲ್ಲಿ ಅಪಾರ ಸಾಧನೆ ಮಾಡಿರುವ ಪ್ರಗತಿಪರ ಕೃಷಿಕ ಮಹಿಳೆ ಡಾ.ಕವಿತಾ ಮಿಶ್ರಾ, ಉದ್ಯಮಶೀಲತೆ ಅಭಿವೃದ್ಧಿ ಕೇಂದ್ರದ ನಿವೃತ್ತ ನಿರ್ದೇಶಕ ಬಿ.ಎಸ್. ರೇವಣಕರ್, ಭೂ ದೃಶ್ಯ ಪರಿಸರ ವಿಜ್ಞಾನ ಕೇಂದ್ರದ ತಜ್ಞ ಬಾಲಚಂದ್ರ ಹೆಗಡೆ ಸಮ್ಮೇಳನದಲ್ಲಿ ವಿಷಯ ಮಂಡನೆ ಮಾಡಲಿದ್ದಾರೆ.
ವಿದ್ಯಾರ್ಥಿಗಳು ಮತ್ತು ಆಸಕ್ತರು ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.

ವಿಸ್ಮಯ ನ್ಯೂಸ ವಿಲಾಸ ನಾಯಕ ಅಂಕೋಲಾ

Back to top button