Important
Trending

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿ ಸಾವು

ಮುರುಡೇಶ್ವರ: ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೋರ್ವನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ರೈಲ್ವೇ ಸಮೀಪದ ರಾಷ್ಟ್ರೀಯ ಹೆದ್ದಾರಿ ಸಮೀಪ ನಡೆದಿದೆ. ಮೃತವ್ಯಕ್ತಿಯ ಅಪರಿಚಿತನಾಗಿದ್ದು, ಸುಮಾರು 35 ರಿಂದ 40 ವರ್ಷ ಹಾಗೂ ಗೋಧಿ ಬಣ್ಣ , ಸಾಧಾರಣ ಮೈಕಟ್ಟು ಹೊಂದಿದ್ದು, ಬಲಗೈ ಈ ಮೊದಲೇ ಸಂಪೂರ್ಣ ಕಟ್ಟಾಗಿರುತ್ತದೆ. ಈತ ಮುರುಡೇಶ್ವರ ರೈಲ್ವೇ ಸಮೀಪದ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಹೊನ್ನಾವರ ಕಡೆಯಿಂದ ಮುರುಡೇಶ್ವರ ಕಡೆಗೆ ಅತಿ ವೇಗ ಹಾಗೂ ಅಜಾಗರುಕತೆಯಿಂದ ಬೈಕ್ ಚಲಾಯಿಸಿಕೊಂಡು ಬಂದ ಬೈಕ್ ಸವಾರ ಹೆದ್ದಾರಿ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಪಾದಚಾರಿಯ ತಲೆಗೆ ತೀವ್ರವಾಗಿ ಗಾಯಗಳಾಗಿದ್ದು, ತಕ್ಷಣ ಅಲ್ಲೇ ಸಮೀಪವಿದ್ದ ಆರ್.ಎನ್.ಎಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾನೆ. ಬೈಕ್ ಸವಾರನ ವಿರುದ್ಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button