ಅಂಕೋಲಾ : ಮಣಿಪುರದಲ್ಲಿ ಇತ್ತೀಚೆಗೆ ನಡೆದ ಮಹಿಳಾ ದೌರ್ಜನ್ಯದ ಘಟನೆ ಖಂಡಿಸಿ ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧ್ಯಕ್ಷೆ ಸುಜಾತಾ ಗಾಂವಕರ ನೇತೃತ್ವದಲ್ಲಿ , ಸಾಂಕೇತಿಕ ಪ್ರತಿಭಟನೆ ನಡೆಸಿ,ತಹಶೀಲ್ದಾರ್ ರವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಮಹಿಳೆಯರನ್ನು ದೇವತೆಯಂತೆ ಪೂಜಿಸುವ ಸಂಸ್ಕೃತಿ ನಮ್ಮ ದೇಶದ್ದಾಗಿದ್ದು ಮಣಿಪುರದಲ್ಲಿ ಇತ್ತೀಚೆಗೆ ಬುಡಕಟ್ಟು ಸಮುದಾಯದ ಕೆಲ ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಹಾಗೂ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯವನ್ನು ಖಂಡಿಸಿತ್ತೇವೆ.ದುಷ್ಟ ಎಸೆಗಿದವರನ್ನು ಗಲ್ಲು ಶಿಕ್ಷೆಗೊಳಪಡಿಸಿಸಬೇಕು. ನೀಚ ಕೃತ್ಯ ನಡೆದು ಇಷ್ಟು ದೀರ್ಘ ಸಮಯವಾದರೂ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ತಟಸ್ಥ ಧೋರಣೆ ತಾಳುತ್ತಿರುವ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಉಪ ತಹಸಿಲ್ದಾರ್ ಸುರೇಶ ಹರಿಕಂತ್ರ ಮನವಿ ಸ್ವೀಕರಿಸಿದರು.ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಸ್ಥಳೀಯ ಪದಾಧಿಕಾರಿಗಳು,ಸದಸ್ಯರು,ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ ಸೇರಿದಂತೆ ಅಂಕೋಲಾ ತಾಲೂಕಿನ ಪಕ್ಷದ ಹಿರಿಕಿರಿಯ ಮುಖಂಡರು, ಕೆಲ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ