Important
Trending

ಹಿಟ್ ಆಂಡ್ ರನ್ ಕೇಸ್: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಹೊನ್ನಾವರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಾಸರಕೊಡ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಸಂಜೆ 7-30 ಸುಮಾರಿಗೆ ಕೆಳಗಿನೂರ ಸಾಲೆಬೈಲ್ ನಿವಾಸಿ ಚಂದ್ರು ಗಣಪತಿ ಆಚಾರಿ (55), ರಸ್ತೆ ದಾಟುತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ವಾಹನ ನಿಲಿಸದೆ ಪರಾರಿಯಾಗಿದೆ.
ರಸ್ತೆಯಲ್ಲಿ ಬಿದ್ದಿದ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಸಾಗಿಸಲಾಗಿತ್ತು, ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ, ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆ ಸಾಗಿಸಲಾಗಿತ್ತು . ಆದರೆ, ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪರಿವ ಬಗ್ಗೆ ವರದಿಯಾಗಿದೆ.ಮಂಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button