Important
Trending

Uttara Kannada: ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಮೊಬೈಲ್ ದೋಚಿದ ಪ್ರಕರಣ: ಆರೋಪಿಯ ಬಂಧನ

ಯಲ್ಲಾಪುರ: ಅಪರಿಚಿನೊಬ್ಬ ನಡೆದು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಬಲವಂತವಾಗಿ ಮೊಬೈಲ್ ದೋಚಿದ್ದು, ಈ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಅಂತರ್ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಟೋಬರ್ 4ರಂದು ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ, ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಬಲವಂತವಾಗಿ ಮೊಬೈಲ್ ಕಿತ್ತುಕೊಂಡು ಹೋಗಿದ್ದ.ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

669 ಹುದ್ದೆಗಳು: 62 ಸಾವಿರ ಮಾಸಿಕ ಸಂಬಳ: ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು

ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಪೊಲೀಸರು ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಅರಫಾತ್ ಅಜೀಮಸಾಬ ಅತ್ತಾರ್(29) ಎಂದು ಗುರುತಿಸಲಾಗಿದೆ. ಈತ ಅಂತರ್ ಜಿಲ್ಲಾ ಕಳ್ಳನಾಗಿದ್ದು, ಈತನ ಮೇಲೆ ಅಂಕೋಲಾ, ಹುಬ್ಬಳ್ಳಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯ ಪೊಲೀಸ್ ವ್ಯಾಪ್ತಿಯಲ್ಲಿಯೂ ಸಹ ಇದೇ ಮಾದರಿಯ ಕಳ್ಳತನ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button