ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಾರವಾರದಲ್ಲಿಂದು 32 ಡಿ.ಸೆ – 25 ಡಿ.ಸೆ ತಾಪಮಾನ ಇದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್