Follow Us On

WhatsApp Group
Important
Trending

ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಮೇಲೆ ಹಲ್ಲೆ

ಹೊನ್ನಾವರ: ಪಟ್ಟಣದ ಗಂಧದ ಓಣಿ ಬಳಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದ್ದು, ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣಪತಿ ಗೌಡ ಎಂಬ ವ್ಯಕ್ತಿ ಚಾಕುವಿನಿಂದ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಈತನ‌ ವಿರುದ್ಧ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಇಲ್ಲಿ ಯಾಕೆ ಬಂದಿದ್ದೀರಾ ಎಂದು ಪ್ರಶ್ನೆ ಮಾಡಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದು, ಈ ವೇಳೆ ಜೀವ ಬೆದರಿಕೆ ಹಾಕಿರುವ ಕುರಿತು ಮಹಿಳೆ ಹೊನ್ನಾವರ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button