Post Office Recruitment 2023: ಬೃಹತ್ ನೇಮಕಾತಿ: 1,714 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು
ಕರ್ನಾಟಕ ಅಂಚೆ ಇಲಾಖೆಯಲ್ಲಿ ಒಟ್ಟು 1,714 ಹುದ್ದೆಗಳು ಖಾಲಿಯಿದ್ದು, ಇದೀಗ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಬ್ರಾಂಚ್ ಪೋಸ್ಟ್ ಮಾಸ್ಟರ್‌ಗಳಿಗೆ 29 ಸಾವಿರದ ವರೆಗೆ ಮತ್ತು ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ ಗಳಿಗೆ 24 ಸಾವಿರದ ವರೆಗೆ ಸಂಬಳ ದೊರೆಯಲಿದೆ.
ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 23 ಅರ್ಜಿ ಸಲ್ಲಿಕೆಗೆ ಕೊನೆಯದಿನವಾಗಿದೆ. ಒಟ್ಟು 1,714 ಹುದ್ದೆಗಳು, ಬೆಂಗಳೂರು, ಬೆಳಗಾವಿ, ಕಾರವಾರ, ಚಿಕ್ಕೋಡಿ, ಗದಗ, ಮಂಗಳೂರು, ರಾಯಚೂರು ಸೇರಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ಮತ್ತು ಗರಿಷ್ಠ 40 ವರ್ಷ ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಮೆರಿಟ್ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಒಟ್ಟು ಹುದ್ದೆಗಳು | 1,714 |
ಇಲಾಖೆ | ಕರ್ನಾಟಕ ಅಂಚೆ ಇಲಾಖೆ |
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ | 23-0802023 |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ನೋಟೀಫಿಕೇಷನ್ ಓದಲು | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಇನ್ನು ಹೆಚ್ಚಿನ ಉದ್ಯೋಗಾವಕಾಶದ ಕುರಿತ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್