Important
Trending

ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಲು ತೆರಳುತ್ತಿದ್ದ ಶಿಕ್ಷಕನಿಗೆ ವಾಹನ ಡಿಕ್ಕಿ: ಸ್ಥಳದಲ್ಲೇ ಸಾವು

ಕುಮಟಾ:ಬೈಕಿನ ಮೇಲೆ ಧ್ವಜಾರೋಹಣಕ್ಕೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರಿಗೆ ಡಿಕ್ಕಿ ಹೊಡೆದ್ದು, ಪರಿಣಾಮವಾಗಿ ಶಿಕ್ಷಕ ಸ್ಥಳದಲ್ಲೆ ( Teacher dies) ಸಾವನ್ನಪ್ಪಿರುವ ಘಟನೆ ತಾಲೂಕಿನ ಹಳಕಾರ ಕ್ರಾಸ್ ಸಮೀಪ ನಡೆದಿದೆ. ಇವರು ಗುಡೆಅಂಗಡಿ ಶಾಲೆ ಶಿಕ್ಷಕಗಾಗಿ ಕಾರ್ಯನಿರ್ವಹಿಸುತ್ತಿದ್ದು, ಧ್ವಜಾರೋಹಣಕ್ಕಾಗಿ ಬೆಳಿಗ್ಗೆ ಮನೆಯಿಂದ ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಬೋಲೆರೋ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: 450 ಹುದ್ದೆಗಳಿಗೆ ನೇಮಕಾತಿ: 80 ಸಾವಿರದ ವರೆಗೆ ವೇತನ:Apply Now

ಈ ವೇಳೆ ಶಿಕ್ಷಕ ಗೋಪಾಲ ಪಟಗಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Back to top button