Focus News
Trending

Masquerade competitions: ಕವಲಕ್ಕಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆ

ಹೊನ್ನಾವರ : ತಾಲೂಕಿನ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಎಲ್.ಕೆ.ಜಿ ಹಾಗೂ ಯು.ಕೆ.ಜಿ ವಿದ್ಯಾರ್ಥಿಗಳಿಗಾಗಿ ಛದ್ಮವೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದರು. ಆಡಳಿತಾಧಿಕಾರಿ ಎಮ್.ಎಸ್.ಹೆಗಡೆ ಗುಣವಂತೆ, ಮುಖ್ಯಶಿಕ್ಷಕಿ ವೈಲೆಟ್ ಫರ್ನಾಂಡಿಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕಿ ಅಶ್ವಿನಿ ಮೇಸ್ತ ಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು. ಪಾಲಕರ ಆಗಮನ ಸ್ಪರ್ಧೆಗೆ ಶೋಭೆಯನ್ನು ತಂದಿತು.

ವಿಸ್ಮಯ ನ್ಯೂಸ್, ಹೊನ್ನಾವರ

Back to top button