ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ, ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ( New India Assurance Recruitment) ಕಂಪನಿಯಲ್ಲಿ ಒಟ್ಟು 450 ಹುದ್ದೆಗಳು ಖಾಲಿಯಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ ಪ್ರಕಾರ ಆಯಾ ಹುದ್ದೆ, ಆಯಾ ವಿಭಾಗಗಳಿಗೆ ಸಂಬoಧಿಸಿದ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳು, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 80 ಸಾವಿರದ ವರೆಗೆ ಇರಲಿದೆ.
ಇದನ್ನೂ ಓದಿ: ಬೃಹತ್ ನೇಮಕಾತಿ: 1,714 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು: Apply Now
ವಿವಿಧ ವಿಭಾಗಗಳಲ್ಲಿ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳ ಭರ್ತಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಗಸ್ಟ್ 21 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಆದ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಹಾಗು ಸಂದರ್ಶನದ ನಡೆಸಿ, ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
New India Ansurance vacancies 2023: ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸುವ ವಿಧಾನ, ನೋಟೀಫಿಕೇಷನ್, ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಗೆ ( New India Assurance Recruitment) ಸಂಬoಧಪಟ್ಟ ಪ್ರಮುಖ ಲಿಂಕ್‌ಗಳು ಈ ಕೆಳಗೆ ನೀಡಲಾಗಿದೆ. ಆಸಕ್ತರು ಭೇಟಿ ನೀಡಿ, ಅವುಗಳನ್ನು ಸರಿಯಾಗಿ ಓದಿಕೊಂಡು, ಪರಿಶೀಲನೆ ನಡೆಸ, ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು | 460 |
ಕಂಪೆನಿ | New India Assurance |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ನೋಟೀಫಿಕೇಷನ್ ಓದಲು | ಇಲ್ಲಿ ಕ್ಲಿಕ್ ಮಾಡಿ |
ಕಂಪೆನಿಯ ವೆಬ್ ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 21-08-2023 |
ಉದ್ಯೋಗಾವಕಾಶದ ಕುರಿತ ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್