Follow Us On

WhatsApp Group
Important
Trending

ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 50 ಕೆ.ಜಿ ತೂಕದ 102 ಪಡಿತರ ಅಕ್ಕಿಚೀಲ ವಶಕ್ಕೆ: ಮೂವರ ಬಂಧನ

ಭಟ್ಕಳ: ಗೋದಾವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 50 ಕೆ.ಜಿ ತೂಕದ 102 ಪಡಿತರ ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ಹೆಗ್ಗಲ್ ನಲ್ಲಿ ನಡೆದಿದೆ. ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ಗುಲಾಬ್ ಸಾಬ್, ಅಬ್ದುಲ್ ರೆಹಮಾನ್ ಹಾಗೂ ಇಮ್ತಿಯಾಜ್ ಎಂದು ಗುರುತಿಸಲಾಗಿದೆ.

ಈ ಗೋದಾಮಿನಲ್ಲಿ ಹಲವು ದಿನಗಳಿಂದ ಅಕ್ರಮವಾಗಿ ಪಡಿತರ ಅಕ್ಕಿ ಚೀಲಗಳನ್ನು ಸಂಗ್ರಹಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ಚಂದನ್ ಗೋಪಾಲ್ ಹಾಗೂ ಆಹಾರ ನಿರೀಕ್ಷಕ ಪಾಂಡು ನಾಯ್ಕ ಹಾಗೂ ಜಾಲಿ ಗ್ರಾಮ ಆಡಳಿತಾಧಿಕಾರಿ ಕೆ ಶಂಭು,ಗ್ರಾಮಸಹಾಯಕ ವಾಸು ಶೇಟಿ ಮತ್ತು ಗ್ರಾಮೀಣ ಠಾಣೆಯ ಸಿಬ್ಬಂದಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು 50 ಕೆ.ಜಿ ತೂಕದ 102 ಪಡಿತರ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button