ಮಾಹಿತಿ
Trending

ಕರೊನಾ ಭೀತಿಯ ನಡುವೆಯೂ ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು

ಇಬ್ಬರು ಗುಣಮುಖರಾಗಿ ಬಿಡುಗಡೆ
12 ಸಕ್ರೀಯ ಪ್ರಕರಣ

[sliders_pack id=”3491″]

ಅಂಕೋಲಾ : ತಾಲೂಕಿನಲ್ಲಿ ಸೋಮವಾರ ಮಳೆಯ ಆರ್ಭಟ ಜೋರಾಗಿದ್ದರೂ, ಯಾವುದೇ ಹೊಸ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳದೇ ಜನತೆ ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ತಾಲೂಕಿನಲ್ಲಿ ಈವರೆಗೆ ಒಟ್ಟು 147ಕೋವಿಡ್ ಪ್ರಕರಣಗಳು ದೃಢಗೊಂಡಿದ್ದು, ಇಂದು ಸೋಂಕಿನಿAದ ಗುಣಮುಖರಾದ ಈರ್ವರನ್ನು ತಾಲೂಕಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 12ಕ್ಕೆ ಇಳಿದಿದೆ. ತಾಲೂಕಿನಲ್ಲಿಂದು 8ಜನರ ಗಂಟಲು ದ್ರವ ಸಂಗ್ರಹಿಸಿ ಪರಿಕ್ಷೆಗೊಳಪಡಿಸಲಾಗಿದೆ.

ಈ ಹಿಂದೆ ಕರೊನಾ ಭೀತಿಯ ನಡುವೆಯೇ ಎಸ್.ಎಸ್.ಎಲ್.ಸಿ ಉತ್ತರಪತ್ರಿಕೆ ಬರೆದಿದ್ದ ವಿದ್ಯಾರ್ಥಿಗಳ ಭವಿಷ್ಯದ ಪರೀಕ್ಷಾ ವರದಿ ಪ್ರಕಟವಾಗಿದ್ದು, ಶಿಕ್ಷಕರು, ಪಾಲಕರು, ಮತ್ತು ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ತಾಲೂಕಿನ ಒಟ್ಟು ಫಲಿತಾಂಶ ‘ಎ’ ಗ್ರೇಡ್ ದಾಖಲಾಗಿದೆ. ಉತ್ತಮ ಫಲಿತಾಂಶ ದಾಖಲಾತಿಗೆ ಕಾರಣರಾದ ಸರ್ವರಿಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಲಾ ನಾಯಕ ತಮ್ಮ ಇಲಾಖೆಯ ಪರವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button