Important
Trending

Rabies:20ಕ್ಕೂ ಹೆಚ್ಚು ಬೀದಿನಾಯಿಗಳಲ್ಲಿ ರೇಬಿಸ್ ಪತ್ತೆ

ಇತರೆಡೆಯೂ ಬೇಕಿದೆ ಕಾರ್ಯಾಚರಣೆ

ಕಾರವಾರ: ರಾಜ್ಯದಲ್ಲಿ ಬೀದಿ ನಾಯಿಗಳ ಕಾಟದಿಂದ ಅದೆಷ್ಟೋ ಜನರು ತಮ್ಮ ಜೀವವನ್ನೇ ಬಲಿ ನೀಡಿದ್ದಾರೆ. ಬೀದಿ ನಾಯಿಗಳನ್ನು ಹಿಡಿದು ಸಂತಾನ ಹರಣ ಚಿಕಿತ್ಸೆ ಜೊತೆ ರೇಬಿಸ್ ( Rabies) ಚುಚ್ಚುಮದ್ದು ನೀಡುವಂತೆ ಹಲವು ವರ್ಷಗಳಿಂದ ಜನರ ಆಗ್ರಹವಿದೆ. ಇದಕ್ಕೆ ಪೂರಕವಾಗಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ರಾಜ್ಯ ಸರ್ಕಾರ ಈ ಯೋಜನೆ ಯನ್ನು ಜಾರಿಗೆ ತಂದಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಗೋವಾ ಗಡಿ ತಾಲೂಕಿನಲ್ಲಿ ಈವರೆಗೂ ಬೀದಿ ನಾಯಿಗಳನ್ನು ಹಿಡಿಯುವ ಅಥವಾ ಅವುಗಳಿಗೆ ಲಸಿಕೆ ನೀಡುವ ಕಾರ್ಯವೇ ನಡೆದಿಲ್ಲ.

ಹೀಗಾಗಿ ದೇಶದಲ್ಲೇ ರೇಬಿಸ್ (Rabies) ಮುಕ್ತ ರಾಜ್ಯ ವಾಗಿರುವ ಗೋವಾ ರಾಜ್ಯ ಇದೀಗ ತನ್ನ ಸುತ್ತಲೂ ಇರುವ ಕರ್ನಾಟಕದ ಗಡಿ ತಾಲೂಕುಗಳಿಗೆ “ಮಿಷನ್ ರೇಬಿಸ್ ಯೋಜನೆಯನ್ನು ತನ್ನ ಬೊಕ್ಕಸದಿಂದ ನೀಡುವ ಮೂಲಕ ಅನುಷ್ಟಾನ ಗೊಳಿಸುತ್ತಿದೆ. ಕಾರವಾರದಲ್ಲಿ ಈವರೆಗೆ 24 ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ರೇಬಿಸ್ ಇರುವುದು ಗೋವಾ ಸರ್ಕಾರ ಇಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ಪತ್ತೆಯಾಗಿದೆ.

Rabies Vaccine: 2500 ಕ್ಕೂ ಹೆಚ್ಚು ಶ್ವಾನಗಳಿಗೆ ರೇಬಿಸ್ ಚುಚ್ಚುಮದ್ದು

ಹೀಗಾಗಿ ತನ್ನ ಅನುದಾನ ಬಳಸಿ ಗಡಿ ಭಾಗದ ತಾಲೂಕುಗಳಾದ ಕಾರವಾರ,ಜೋಯಿಡಾ ತಾಲೂಕಿನಲ್ಲಿ ಈ ಯೋಜನೆ ಜಾರಿ ಮಾಡಿದ್ದು ಕಾರವಾರದಲ್ಲಿ ಕಳೆದ ಎರಡು ವಾರದಿಂದ ಗೋವಾ ಸರ್ಕಾರದ ಮಿಷನ್ ರೇಬಿಸ್ ತಂಡ 2500 ಕ್ಕೂ ಹೆಚ್ಚು ಶ್ವಾನಗಳಿಗೆ ರೇಬಿಸ್ ಚುಚ್ಚುಮದ್ದು ನೀಡಿದೆ. ಪಣಜಿ ಯಿಂದ ಕಾರ್ಯಾಚರಣೆ ನಡೆಸುವ ಮಿಷನ್ ರೇಬಿಸ್ ತಂಡ ಪ್ರತಿ ದಿನ ಕಾರವಾರ ತಾಲೂಕಿಲ್ಲಿ ಬರುತಿದ್ದು ಎರಡು ತಂಡಗಳು ಇಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.ಕೇವಲ ಉಚಿತ ಚುಚ್ಚುಮದ್ದು ನೀಡುವ ಜೊತೆಗೆ 24×7 ಹೆಲ್ಪ್ ಲೈನ್ ಸಹ ತೆರದಿದ್ದು ಶ್ವಾನಗಳು,ಹಸುಗಳು,ಬೆಕ್ಕುಗಳಿಗೆ ತಮ್ಮ ಅನುದಾನದಲ್ಲಿ ಉಚಿತ ಚಿಕಿತ್ಸೆ ( rabies vaccine) ನೀಡುತ್ತಿದೆ.

ಗೋವಾ ರಾಜ್ಯದ ಗಡಿ ತಾಲೂಕಾದ ಕಾರವಾರದಲ್ಲಿ ಹತ್ತುಸಾವಿರಕ್ಕೂ ಹೆಚ್ಚು ಶ್ವಾನಗಳಿವೆ.ಇವುಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಅಧಿಕ. ಇತ್ತೀಚೆಗೆ ಬೀದಿ ನಾಯಿಗಳ ಕಡಿತವೂ ಹೆಚ್ಚಾಗಿದ್ದು, ಈ ಹಿಂದೆ ಬೀದಿ ನಾಯಿ ಕಡಿತಕ್ಕೆ ಹಸುವೊಂದು ರೇಬಿಸ್ ಬಂದು ಸಾವನ್ಬಪ್ಪಿತ್ತು.ಇನ್ನು ಸ್ಥಳೀಯ ಆಡಳಿತ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದರೂ ಯಾವುದೇ ಕಾರ್ಯಾಚರಣೆಗೆ ಇಳಿದಿಲ್ಲ.

ರೋಗ ಪತ್ತೆಗೆ ಲ್ಯಾಬ್ ಇಲ್ಲ

ಇನ್ನು ಪಶುಸಂಗೋಪನಾ ಇಲಾಖೆಯಲ್ಲಿ ರೇಬಿಸ್ ಸೊಂಕು ಎಷ್ಟು ಹಬ್ಬಿವೆ ಎಂದು ಸಹ ಮಾಹಿತಿ ಇಲ್ಲ. ( rabies virus) ರೋಗ ಪತ್ತೆಗೆ ಲ್ಯಾಬ್ ಇಲ್ಲ,ಇದಲ್ಲದೇ ಸಂತಾನ ಹರಣ ಚಿಕಿತ್ಸೆ,ರೇಬಿಸ್ ಚುಚ್ಚುಮದ್ದು ನೀಡಲು ವೈದ್ಯರ ಕೊರತೆ ಜೊತೆ ಶ್ವಾನಗಳನ್ನು ಹಿಡಿಯಲು ಸಹ ಸಿಬ್ಬಂದಿಗಳಿಲ್ಲ.ಹೀಗಾಗಿ ಗಡಿ ಭಾಗದ ಜನ ಗೋವಾ ಸರ್ಕಾರ ಮಾಡುತ್ತಿರು ಕಾರ್ಯವನ್ನು ಶ್ಲಾಗಿಸಿದ್ದು ಗೋವಾ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಗೋವಾ ಸರ್ಕಾರ ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಮೆಚ್ಚುಗೆ

ಗೋವಾ ರಾಜ್ಯಕ್ಕೆ ಹೊಂದಿಕೊoಡ ಕರ್ನಾಟಕ ಗಡಿಯಲ್ಲಿ ಗೋವಾ ಸರ್ಕಾರ ಮಾಡುತ್ತಿರುವ ಉತ್ತಮ ಕಾರ್ಯಗಳಿಗೆ ಮೆಚ್ಚುಗೆ ಏನೋ ವ್ಯಕ್ತವಾಗುತ್ತಿದೆ. ಜೊತೆಗೆ ಸ್ಥಳೀಯ ಜನರಲ್ಲಿ ಗೊವಾ ಅಭಿಮಾನ ಸಹ ಹೆಚ್ಚುತ್ತಿದೆ.ಆದ್ರೆ ಸದಾ ಗಡಿ ಕ್ಯಾತೆ ತೆಗೆಯುತ್ತಿರು ಗೋವಾ ಸರ್ಕಾರ ಈ ಹಿಂದೆ ಕಾರವಾರ ,ಜೋಯಿಡಾ ವನ್ನು ತಮ್ಮ ರಾಜ್ಯಕ್ಕೆ ಸೇರಿಸಬೇಕು ಎಂಬ ಬೇಡಿಕೆ ಇಟ್ಟಿತ್ತು.ಹೀಗಿರುವಾಗ ನಮ್ಮ ಸರ್ಕಾರ ಗಡಿ ಭಾಗವನ್ನು ನಿರ್ಲಕ್ಷಿಸುತ್ತಿರುವುದು ಮಾತ್ರ ದುರಂತ.

ವಿಸ್ಮಯ ನ್ಯೂಸ್, ಕಾರವಾರ

Back to top button