Woman Death: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ: ಮಹಿಳೆ ಸಾವು

ಕುಮಟಾ: ಹೆದ್ದಾರಿಯನ್ನು ದಾಟುತ್ತಿರುವ ವೇಳೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ (woman death) ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಧಾರೇಶ್ವರದ ನಾಗತೀರ್ಥ ಸಮೀಪ ನಡೆದಿದೆ. ಗೌರಿ ನಾಯ್ಕ ಎಂಬವರು ಮೃತ ಮಹಿಳೆ. ಈಕೆ ರಸ್ತೆ ದಾಟುತ್ತಿರುವ ಸಂದರ್ಭದಲ್ಲಿ, ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Exit mobile version