Important
Trending

ಬಹುಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

[sliders_pack id=”3491″]

ಅಂಕೋಲಾ: ತಾಲೂಕಿನ ಸಗಡಗೇರಿ ಗ್ರಾಮ ವ್ಯಾಪ್ತಿಯಲ್ಲಿ ಮಂಗಳವಾರ ಸ್ಥಳೀಯ ಶಾಸಕಿ ಮತ್ತು ಸಂಸದ ನೇತ್ರತ್ವದಲ್ಲಿ ಬಹುಕೋಟಿ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸ್ಥಳೀಯರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.ಕೇoದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ 3 ರಡಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಅನುಧಾನ ನೀಡಲಾಗುತ್ತಿದೆ. ಈ ಯೋಜನೆಯಲ್ಲಿಯೇ ಅಂಕೋಲಾ ತಾಲೂಕಿನ ಸಗಡಗೇರಿ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು ತಾರಿಬೈಲ್‌ದಿಂದ ಹೆಗ್ರೆ ತೋಟದಕೇರಿವರೆಗೆ ಒಟ್ಟೂ 8.27 ಕಿ.ಮೀ ರಸ್ತೆ ಸುಧಾರಣೆಗೆ ಅಂದಾಜು 5.12 ಕೋಟಿ ಮೊತ್ತ ವ್ಯಯಿಸಲಾಗಿತ್ತಿದೆ.


ಉತ್ತರಕನ್ನಡದ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಬಹುಕೋಟಿ ವೆಚ್ಚದ ಗ್ರಾಮೀಣ ರಸ್ತೆ ಅಭಿವೃದ್ದಿಗೆ ಶಂಕು ಸ್ಥಾಪನೆ ನೇರವೇರಿಸಿದರು. ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಭೂಮಿ ಪೂಜೆ ನೆರವೇರಿಸಿ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದರು. ತಾಲೂಕ ಪಂಚಾಯತ್ ಅಧ್ಯಕ್ಷೆ ಸುಜಾತಾ ಗಾಂವಕರ, ಜಿಲ್ಲಾ ಪಂಚಾಯತ್ ಸದಸ್ಯ ಜಗದೀಶ ನಾಯಕ ಮೊಗಟಾ, ತಹಶೀಲ್ದಾರ ಉದಯ ಕುಂಬಾರ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಪಿ.ವೈ. ಸಾವಂತ ಸೇರಿದಂತೆ ಇತರೇ ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥತರಿದ್ದರು.


ಈ ರಸ್ತೆ ತಾರಿಬೈಲ್‌ದಿಂದ ಅಗ್ರಗೋಣ ಜೂಗ, ವಾಯಾ ಬೋಳಕುಂಟೆ, ಸಗಡಗೇರಿ, ಬೈಲ್ಕೇರಿ, ಹೆಗ್ರೆ-ತೋಟದಕೇರಿಯವರೆಗೆ ಅಭಿವೃದ್ದಿಯಾಗಲ್ಲಿದ್ದು ಸುತ್ತಲಿನ ಹತ್ತಾರು ಹಳ್ಳಿಗಳ ಸಂಪರ್ಕ ವ್ಯವಸ್ಥೆ ಉತ್ತಮಗೊಳ್ಳಲಿದೆ.
ಕರೊನಾ ಭೀತಿ ಹಾಗೂ ನೆರೆಯ ಆತಂಕದ ನಡುವೆಯೂ ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಅಭಿವೃದ್ದಿ ಕಾಮಗಾರಿ ಹಾಗೂ ಜನಜೀವನ ಮಟ್ಟ ಸುಧಾರಣೆಗೆ ವಿಶೇಷ ಒತ್ತು ನೀಡಿದಂತಿದೆ. ಸ್ಥಳೀಯ ಶಾಂತಿಕಾ ಪರಮೇಶ್ವರಿ ದೇವಾಲಯದ ಅಭಿವೃದ್ದಿಗೂ ಅನುಧಾನ ನೀಡುವುದಾಗಿ ಶಾಸಕಿ ರೂಪಾಲಿ ನಾಯ್ಕ ಭರವಸೆ ನೀಡಿದರು.


ಕಾಮಗಾರಿ ಶಂಕುಸ್ಥಾಪನೆಯ ಸರಳ ಕಾರ್ಯಕ್ರಮದಲ್ಲಿ ಪ್ರಮುಖರಾದ ಗಣಪತಿ ಉಳ್ವೇಕರ, ಅರುಣ ನಾಡ್ಕರ್ಣಿ, ಪ್ರಸಾಂತ ನಾಯಕ, ಸಂಜಯ ನಾಯ್ಕ ಭಾವಿಕೇರಿ, ಭಾಸ್ಕರ ನಾರ್ವೇಕರ, ರಾಧಾ ನಾಯಕ, ಜಯಾ ನಾಯ್ಕ, ತಾರಾ ನಾಯ್ಕ, ಅನುರಾಧಾ, ಚಂದ್ರಕಾoತ ನಾಯ್ಕ, ಬಿಂದೇಶ ನಾಯಕ, ಹೊಸಬಣ್ಣ ನಾಯಕ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ತಾಲೂಕಿನ ಇನ್ನಷ್ಟು ಗ್ರಾಮೀಣ ಮತ್ತು ಪಟ್ಟಣ ವ್ಯಾಪ್ತಿಯ ಮೂಲಭೂತ ಸೌಕರ್ಯ ಅಭಿವೃದ್ದಿ ಕಾಣಬೇಕಿದ್ದು ಎಲ್ಲಾ ಸ್ತರದ ಜನಪ್ರತಿನಿಧಿಗಳು ಹಾಗೂ ಇಲಾಕೇಯ ಅಧಿಕಾರಿಗಳು ಶಿಸ್ತುಬದ್ದ ಯೋಜನೆ ರೂಪಿಸಿ ಜಾರಿಗೊಳಿಸಬೇಕಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button