Important
Trending

Karnataka Politics: ಸಿಎಂ ಭೇಟಿಯಾದ ಶಿವರಾಮ್ ಹೆಬ್ಬಾರ್!

ಬೆಂಗಳೂರು: ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ, ವದಂತಿಗಳ ಬೆನ್ನಲ್ಲೆ, ( Karnataka Politics) ಈಗ ಶಿವರಾಮ್ ಹೆಬ್ಬಾರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ. ಹೌದು, ಮಾಜಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ, ಮಾತುಕತೆ ನಡೆಸಿದರು.

ಮೂಲಗಳ ಪ್ರಕಾರ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಹೆಬ್ಬಾರ್ ಅವರು ಈ ವೇಳೆ ಮನವಿ ಸಲ್ಲಿಸಿದರು. ಯಲ್ಲಾಪುರ, ಮುಂಡಗೋಡ ಮತ್ತು ಬನವಾಸಿ ಭಾಗದಲ್ಲಿ ಈ ವರ್ಷ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಅಂದಾಜಿನ ಪ್ರಕಾರ ಶೇಕಡಾ 70% ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ನಮ್ಮ ಭಾಗದ ರೈತರ ಹಿತದೃಷ್ಟಿಯಿಂದ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button